10:02 PM Wednesday5 - February 2025
ಬ್ರೇಕಿಂಗ್ ನ್ಯೂಸ್
ಕೇಂದ್ರ ಬಿಜೆಪಿ ನಾಯಕರ ರಾಜಕೀಯದಿಂದ ರಾಯಚೂರು ಏಮ್ಸ್‌ ಅನಗತ್ಯ ವಿಳಂಬ: ಸಚಿವ ಭೋಸರಾಜು… ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ; ಆನೆ ಹಾವಳಿ ತಡೆಯುವಲ್ಲಿ ಕೆ.ಪಿ. ಟ್ರ್ಯಾಕರ್… ಕಾಂಗ್ರೆಸ್ ಸರಕಾರದಿಂದ ರಾಜ್ಯ ಸೂತಕದ ಮನೆಯಾಗಿದೆ: ಹಾಸನದಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ… ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ DUO ಬ್ಲಾಕ್ ವಾಟರ್ ಸಾಫ್ಟನರ್: ಯುರಾಕ್ವಾ ಜತೆ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್ ಪಾಲುದಾರಿಕೆ ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ… ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ;…

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಸಚಿವ ಪಿಯೂಷ್ ಗೆ ಆಹ್ವಾನ

05/02/2025, 21:12

ನವದೆಹಲಿ(reporterkarnataka.com): ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು..

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಆಮಂತ್ರಣ ನೀಡಿದ್ದಾರೆ.
ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ ನೂತನ‌ ಕೈಗಾರಿಕಾ ನೀತಿ ಹಾಗೂ ಸ್ವಚ್ಛ ಇಂಧನ‌ ನೀತಿಯ ಬಗ್ಗೆ ನಿರ್ಮಲಾ ಸೀತಾರಾಮನ್ ಅವರಿಗೆ ಮಾಹಿತಿ ನೀಡಿದರು.
ಬಳಿಕ ಪಾಟೀಲ್ ಅವರು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಮತ್ತು ಎಐಸಿಸಿ ಉಸ್ತುವಾರಿ, ಸಂಸದ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ, ಆಹ್ವಾನ ಪತ್ರಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು