6:33 PM Thursday26 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 13 ಕಂಪನಿಗಳ ಜತೆ ಕ್ರೆಡಲ್ ಒಪ್ಪಂದಕ್ಕೆ ಸಹಿ: 78,253 ಉದ್ಯೋಗ ಸೃಷ್ಟಿ

11/02/2025, 22:05

ಬೆಂಗಳೂರು(reporterkarnataka.com): ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ.
ಮಂಗಳವಾರ ಸಮಾವೇಶದ ಉದ್ಘಾಟನೆ ಬಳಿಕ ನವೀರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿದ ಸಂಸ್ಥೆಗಳ ಮುಖ್ಯಸ್ಥರು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಂದ ಒಪ್ಪಂದ ಪತ್ರ ಸ್ವೀಕರಿಸಿದರು.
ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಅವರು ಉಪಸ್ಥಿತರಿದ್ದರು.
ನವೀಕರಿಸಹುದಾದ ಇಂಧನ ಕ್ಷೇತ್ರದಲ್ಲಿ ಒಟ್ಟು 13 ಕಂಪನಿಗಳು ಹೂಡಿಕೆಗೆ ಆಸಕ್ತಿ ತೋರಿದ್ದು, ಒಟ್ಟು 3,42,925 ಕೋಟಿ ರೂ. ಹೂಡಿಕೆಗೆ ಮುಂದಾಗಿದ್ದಾರೆ. ಇದರಿಂದ 78,253 ಮಂದಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ.
*ಪ್ರಮುಖ ಹೂಡಿಕೆಗಳು*:
ಜೆಎಸ್ ಡಬ್ಲ್ಯು ನಿಯೋ ಎನರ್ಜಿ ಲಿಮಿಟೆಡ್- 56 ಸಾವಿರ ಕೋಟಿ ರೂ.ರಿನ್ಯೂ ಪ್ರೈ. ಲಿ. ಮತ್ತು ಟಾಟಾ ಪವರ್ ರಿನಿವೇಬಲ್ ಎನರ್ಜಿ ಲಿಮಿಟೆಡ್ ಗಳು ತಲಾ 50 ಸಾವಿರ ಕೋಟಿ ರೂ.,
ಸೆರೆಂಟಿಕಾ ರಿನಿವೇಬಲ್ ಇಂಡಿಯಾ ಪ್ರೈ. ಲಿ.- 43,975 ಕೋಟಿ ರೂ.,
ಮಹೀಂದ್ರ ಸಸ್ಟೆನ್ ಪ್ರೈ.ಲಿ.- 35,000 ಕೋಟಿ ರೂ. ಸೇರಿದಂತೆ ವಿವಿಧ ಕಂಪನಿಗಳು ಒಟ್ಟಾರೆ 3,42,925 ಕೋಟಿ ರೂ. ಮೊತ್ತದ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಿವೆ.

ಇತ್ತೀಚಿನ ಸುದ್ದಿ

ಜಾಹೀರಾತು