9:39 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ: ಬೆಂಗಳೂರು ವಿವಿ ಭೌತಶಾಸ್ತ್ರ ಪ್ರಾಧ್ಯಾಪಕ ಡಾ.ಬಿ.ಈರಯ್ಯಗೆ ಸ್ಥಾನ

12/10/2023, 13:36

ಬೆಂಗಳೂರು(reporterkarnataka.com): 2023ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಅಮೆರಿಕದ ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡಿನ ಎಲ್ಸೆ ವಿಯರ್ ಪ್ರಕಾಶನ ಸಂಸ್ಥೆಯ 2023ನೇ ಜಾಗತಿಕ ಉನ್ನತ ಮಟ್ಟದ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ (Glass Science and Technology) ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ಬಿಡುಗಡೆ ಮಾಡಿರುವ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಗುರುತಿಸಿ ಕೊಂಡಿದ್ದಾರೆ.
ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್‌ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಶ್ರೇಷ್ಠ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಕಲ್ಪಿಸುತ್ತದೆ.
ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಈರಯ್ಯ ಅವರು ಅಂತರಾಷ್ಟ್ರೀಯವಾಗಿ ಪ್ರಕಟವಾದ 145 ಸಂಶೋಧನಾ ಪ್ರಕಟಣೆಗಳು,1653 ಸೈಟೇಷನ್, 24 ಹೆಚ್ ಇಂಡೆಕ್ಸ್), 37 ಐ 10 ಇಂಡೆಕ್ಸ್ (i 10-index), (Glass Science and Technology) ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಇವರು 145 ಸಂಶೋಧನಾ ಲೇಖನಗಳನ್ನು
ಪರಿಶೀಲಿಸಿದ ನಂತರ ಜಾಗತಿಕ ಶ್ರೇಷ್ಠದ ಶೇ.2ರಷ್ಟು ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯವು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸೇರಿರುವುದು ವಿಶೇಷವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು