12:17 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಜೈನ ಮುನಿಯ ಬರ್ಬರ ಹತ್ಯೆ: ಇನ್ನೂ ಪತ್ತೆಯಾಗದ ಪಾರ್ಥಿವ ಶರೀರ; ಇಬ್ಬರ ಬಂಧನ; ಆಪ್ತರಿಂದಲೇ ದುಷ್ಕೃತ್ಯ?

08/07/2023, 16:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ
ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇದೀಗ ಅವರು ಹತ್ಯೆಗೀಡಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಆಪ್ತರೇ ಕೊಲೆ ಮಾಡಿರುವುದು ಗೊತ್ತಾಗಿದ್ದು ಹತ್ಯೆಗೆ ಕಾರಣ ಹಾಗೂ ಶವ ಇನ್ನೂ ಪತ್ತೆಯಾಗಬೇಕಿದೆ.


ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ಮುನಿ ವಾಸವಿದ್ದರು. ಅವರು ನಾಪತ್ತೆಯಾದ ಬಗ್ಗೆ ಆಚಾರ್ಯ ಕಾಮಕುಮಾರ ನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆಯ ವೇಳೆ ಜೈನಮುನಿಯ ಹತ್ಯೆಯಾಗಿರುವುದು ಬಯಲಾಗಿದೆ. ತನಿಖೆ ಸಂದರ್ಭದಲ್ಲಿ ರಾತ್ರಿಯಿಡೀ ಇಬ್ಬರು ಆರೋಪಿಗಳು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದರು. ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ನೀಡದೇ ಸತಾಯಿಸಿದ್ದರು. ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದಿದ್ದೇವೆ ಎಂದಿದ್ದರು. ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದರು. ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ ಪೊಲೀಸರಿಗೆ ಶವ ದೊರೆತಿಲ್ಲ. ಇಂದು ಬೆಳಗ್ಗೆ 6.30ರಿಂದ ಮುನಿಗಳ ಮೃತದೇಹದ ಶೋಧ ಕಾರ್ಯ ಮತ್ತೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು