ಇತ್ತೀಚಿನ ಸುದ್ದಿ
ಜೈನ ಮುನಿಯ ಹತ್ಯೆ ಖಂಡನೀಯ, ಮನುಜ ಕುಲವೇ ತಲೆತಗ್ಗಿಸುವ ವಿಚಾರ: ಮುನಿಯಾಲು ಉದಯ ಕುಮಾರ್ ಶೆಟ್ಟಿ
10/07/2023, 18:25

ಕಾರ್ಕಳ(reporterkarnataka.com): ಸಮಾಜದಲ್ಲಿ ಅಹಿಂಸೆ ಸಿದ್ದಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಭೀಕರವಾಗಿ ಕೊಲೆ ಮಾಡಿರುವುದು ಮನುಜ ಕುಲವೇ ತಲೆತಗ್ಗಿಸುವ ವಿಚಾರ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕು,ಜೈನ ಮುನಿ ಹತ್ಯೆ ಸ್ವಾಸ್ಥ್ಯ ಸಮಾಜ ಬಯಸುವವರಿಗೆ ಕರಾಳ ದಿನ.ಇದನ್ನು ಪಕ್ಷ ಜಾತಿ ಧರ್ಮ ಅಥವಾ ಸರ್ಕಾರವೆಂದು ನೋಡದೆ ಎಲ್ಲರೂ ಖಂಡಿಸಬೇಕು ಎಂದು ಅವರು ಹೇಳಿದ್ದಾರೆ.
ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಜೈನ ಮುನಿಯ ಹತ್ಯೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಂಡಿಸಿದ್ದು,ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಹುಬ್ಬಳ್ಳಿಯ ವರೂರು ಶ್ರೀ ಗುಣಧರ ನಂದಿ ಮಹಾರಾಜ ಸ್ವಾಮೀಜಿಗಳು, ಎಲ್ಲಾ ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ
ಘಟನೆ ನಡೆದ ಕೇವಲ 24 ಗಂಟೆಯಲ್ಲಿ ಜೈನ ಮುನಿ ಹತ್ಯೆಮಾಡಿದ ಇಬ್ಬರು ಆರೋಪಿಗಳ ಬಂಧನವಾಗಿದೆ.