2:17 PM Saturday10 - October 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ…

ಇತ್ತೀಚಿನ ಸುದ್ದಿ

ಜೈಪುರದ ಕ್ಯಾಸಿನೋ ಪಾರ್ಟಿಯಲ್ಲಿ ಕರ್ನಾಟಕದ ಪ್ರಮುಖ ಕುಳಗಳು: ಅಧಿಕಾರಿಗಳ ಮೋಜು-ಮಸ್ತಿ ಕಂಡು ದಂಗಾದ ಪೊಲೀಸರು

22/08/2022, 15:28

ಜೈಪುರ(reporterkarnataka.com):
ಕ್ಯಾಸಿನೊ ಮದ್ಯದ ಡ್ಯಾನ್ಸ್ ಪಾರ್ಟಿಯಲ್ಲಿ ಕರ್ನಾಟಕದ ಕೆಲ ದೊಡ್ಡ ದೊಡ್ಡ ಹುದ್ದೆಯಲ್ಲಿನ ಅಧಿಕಾರಿಗಳು ಸೇರಿದಂತೆ 84 ಮಂದಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಜೈಸಿಂಗ್‌ಪುರ ಖೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್ ಹೌಸ್‌ನಲ್ಲಿ ಪಾರ್ಟಿ ನಡೆಯುತ್ತಿರುವ ವೇಳೆ ಜೈಪುರ ಪೊಲೀಸ್ ಕಮಿಷನರೇಟ್ ವಿಶೇಷ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಅಧಿಕಾರಿ ಕೂಡ
ಸಿಕ್ಕಿಬಿದ್ದಿದ್ದಾರೆ. ಸ್ಥಳದಲ್ಲಿದ್ದ 13 ಮಂದಿ ಹುಡುಗಿಯರನ್ನೂ ಬಂಧಿಸಲಾಗಿದೆ.

ಕರ್ನಾಟಕದ ಪೊಲೀಸ್ ಇನ್​​ಸ್ಪೆಕ್ಟರ್ ಅಂಜಯ್ಯ, ಬೆಂಗಳೂರಿನ ತಹಶೀಲ್ದಾರ್ ಶ್ರೀನಾಥ್ ಮತ್ತು ಕಾಲೇಜು ಪ್ರಾಧ್ಯಾಪಕ ಕೆ.ಎಲ್. ರಮೇಶ್ ಸೇರಿದಂತೆ ಕೆಲವರು ಈ ಸ್ಥಳದಲ್ಲಿ ಪಾರ್ಟಿ ಮಾಡುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ದಾಳಿಯ ನಂತರ 9 ಹುಕ್ಕಾಗಳು, 21 ಜೋಡಿ ಕಾರ್ಡ್‌ಗಳು, 7 ಟೇಬಲ್‌ಗಳು, 100 ಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಮತ್ತು 23 ಲಕ್ಷದ 71 ಸಾವಿರದ 408 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಈವೆಂಟ್ ಮ್ಯಾನೇಜರ್ ನರೇಶ್ ಮಲ್ಹೋತ್ರಾ ಅಲಿಯಾಸ್ ರಾಹುಲ್, ಅವರ ಮಗ ಮನ್ವೇಶ್, ಫಾರ್ಮ್ ಹೌಸ್ ಮ್ಯಾನೇಜರ್ ಮೋಹಿತ್ ಸೋನಿ, ಮೀರತ್ ನಿವಾಸಿ ಮನೀಶ್ ಶರ್ಮಾ ಅವರನ್ನು ಮಾನವ ಕಳ್ಳಸಾಗಣೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ.

ಕರ್ನಾಟಕ ಮಾತ್ರವಲ್ಲದೇ ತೆಲಂಗಾಣ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ದೆಹಲಿ ಮತ್ತು ಮಹಾರಾಷ್ಟ್ರದ ಅಧಿಕಾರಿಗಳು ಹಾಗೂ ನಿವಾಸಿಗಳು ಇಲ್ಲಿ ಪಾರ್ಟಿಗೆಂದು ಬಂದಿದ್ದು ಎಲ್ಲರೂ ಸಿಕ್ಕಿಬಿದ್ದಿದ್ದಾರೆ. ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲಿ ಕುಡಿದು ಕುಪ್ಪಳಿಸಿ ಅಶ್ಲೀಲವಾಗಿದ್ದ ಅಧಿಕಾರಿಗಳು ಹಾಗೂ ಪಾರ್ಟಿಯಲ್ಲಿ ಮೋಜು ಮಾಡುತ್ತಿದ್ದವರನ್ನು ನೋಡಿ ಪೊಲೀಸರೇ ಬೆರಗಾಗಿದ್ದಾರೆ. ಮದ್ಯದ ಜತೆಗೆ 5 ಟೇಬಲ್‌ಗಳಲ್ಲಿ ಡ್ಯಾನ್ಸ್ ಪಾರ್ಟಿಯೊಂದಿಗೆ ಆನ್‌ಲೈನ್ ಕ್ಯಾಸಿನೊ ಸಹ ನಡೆಯುತ್ತಿತ್ತು. ಅಲ್ಲದೇ ಅಲ್ಲಿದ್ದವರು ಹುಕ್ಕಾ ಸಹ ಹೊಡೆಯುತ್ತಿದ್ದರು ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯ ಈವೆಂಟ್ ಕಂಪೆನಿಯೊಂದು ಫಾರ್ಮ್ ಹೌಸ್​ನ್ನು 2 ದಿನ ಬಾಡಿಗೆಗೆ ಪಡೆದು, ಕ್ಯಾಸಿನೊ ಜೊತೆಗೆ ಜೂಜಾಟ ಸಹ ನಡೆಸುತ್ತಿತ್ತು. ಜೂಜು ಆಡುತ್ತಿದ್ದವರಲ್ಲಿ ಅನೇಕರು ದೊಡ್ಡ ದೊಡ್ಡ ಹುದ್ದೆಯಲ್ಲಿ ಇದ್ದವರೇ ಆಗಿರುವುದಾಗಿ ಹೆಚ್ಚುವರಿ ಪೊಲೀಸ್ ಕಮಿಷನರ್ ಕ್ರೈಂ ಅಜಯ್‌ಪಾಲ್ ಲಂಬಾ ಹೇಳಿದ್ದಾರೆ. ಹೊರಗಿನಿಂದ ಹುಡುಗಿಯರನ್ನು ಇಲ್ಲಿಗೆ ಬಂದವರಿಗೆ ಒದಗಿಸಲಾಗುತ್ತಿತ್ತು. ಆರೋಪಿ ಮನೀಶ್ ನೇಪಾಳದಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಲಂಬಾ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು