2:26 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಲಾವೃತಗೊಂಡ ಮನೆಯಿಂದ ಸಾಮಗ್ರಿ ಸ್ಥಳಾಂತರ ವೇಳೆ ದುರ್ಘಟನೆ: ಪ್ರವಾಹಕ್ಕೆ ಕೊಚ್ಚಿ ಹೋದ ರೈತ

27/07/2021, 13:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಸಮೀಪ ಮನೆಯ ಸಾಮಗ್ರಿ, ದನಕರು ಸ್ಥಳಾಂತರ ವೇಳೆ ನದಿಯ ನೀರಿನಲ್ಲಿ ಸವದಿ ಗ್ರಾಮದ ರಾಮಗೌಡ ಸಿದಗೌಡ ಪಾಟೀಲ(55) ಕೊಚ್ಚಿ ಹೋದ ದುರ್ಘಟನೆ ಭಾನುವಾರ ಸಂಜೆ ನಡೆದಿದೆ.

ಘಟನಾ ಸ್ಥಳಕ್ಕೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಹಾಗೂ ಚಿಕ್ಕೋಡಿ ಸಹಾಯಕ ಕಮಿಷರ್ ಯುಕೇಶ ಕುಮಾರ ಬೇಟಿ ನೀಡಿ ಘಟನೆಯ ಮಾಹಿತಿ ಪಡೆದರು.ಕುಟುಂಬದ ಸದಸ್ಯರಿಗೆ ದೈರ್ಯ ತುಂಬಿದರು.


ಅನಂತರ ಮಾತನಾಡಿದ ಶಾಸಕ ಮಹೇಶ ಕುಮಟಳ್ಳಿ, ಹೆಚ್ಚಾದ ನೀರಿನ ಸೆಳೆತದಿಂದ ಎಲ್ಲೆಲ್ಲಿ ಕಬ್ಬು ಬೆಳೆಯಲಾಗಿದೆಯೋ ಅಲ್ಲೆಲ್ಲಾ ಕೆಸರು ಬಂದಿದ್ದು, ಸಾರ್ವಜನಿಕರು ವಿನಾಃ ಕಾರಣ ನೀರಿಗೆ ಇಳಿಯಬಾರದು. ಹಾಗೆ ಪ್ರವಾಹದ ಬಗ್ಗೆ ಎಲ್ಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ತಾಲೂಕಿನ ಅಧಿಕಾರಿಗಳಿಗೆ ತಿಳಿಸಿದರು.


ಈ ವೇಳೆ ಮಲಗೌಡ ಪಾಟೀಲ, ತಹಶೀಲ್ದಾರ ದುಂಡಪ್ಪಾ ಕೋಮಾರ, ತಾಪಂ ಅಧಿಕಾರಿ ಶೇಖರ ಕರಬಸಪ್ಪಗೋಳ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡರ, ಉಪತಹಶಿಲ್ದಾರ ಮಹಾದೇವ ಬಿರಾದಾರಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು