8:06 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಮೀರ್ ಸಂವಿಧಾನಕ್ಕೂ ಬೆಲೆ ಕೊಡದ ಸಚಿವ; ಕಾಂಗ್ರೆಸ್ ನಲ್ಲೇ ಹೆಚ್ಚು ಕೋಮುವಾದಿಗಳಿದ್ದಾರೆ: ಶಾಸಕ ಡಾ.ಭರತ್ ಶೆಟ್ಟಿ

19/11/2023, 13:06

ಮಂಗಳೂರು(reporterjarnataka.com):ಎಪಿಜೆ ಅಬ್ದುಲ್ ಕಲಾಂ ಅವರಂತಹ ಶ್ರೇಷ್ಟರನ್ನು ರಾಷ್ಟ್ರಪತಿ ಮಾಡಿದ ಬಿಜೆಪಿ,ಸಂವಿಧಾನಾತ್ಮಕ ಹುದ್ದೆಯನ್ನು ಹೊಂದಿರುವ ಶಾಸಕ ಯು.ಟಿ. ಖಾದರ್ ಅವರಿಗೂ, ಗೌರವ ಕೊಡುತ್ತದೆ. ಜಾತಿ ಮತ ಭೇದವನ್ನು ಪರಿಗಣಿಸಿಲ್ಲ.
ಕಾಂಗ್ರೆಸ್ ವಲಸೆ ನಾಯಕ, ಸಚಿವ ಜಮೀರ್ ಅಹ್ಮದ್ ಸದಾ ತನ್ನ ಕೋಮಿನ ಜನರನ್ನು ಹಿಂದುಗಳ ವಿರುದ್ದ ಎತ್ತಿಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೋಮುವಾದಿ ಎಂಬುದು ಬಹಿರಂಗವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ‌ಯು ಶಾನ್ವಾಝ್ , ಅಬ್ಬಾಸ್ ನಕ್ವಿ‌ ಅವರಂತಹವರಿಗೆ ಸಚಿವ ಸ್ಥಾನ ನೀಡಿ ಗೌರವಿಸಿದೆ. ಅವರೆಲ್ಲಾ ದೇಶದ ಸಂವಿಧಾನ, ರಾಷ್ಟ್ರೀಯತೆಯಲ್ಲಿ ನಂಬಿಕೆ ಯುಳ್ಳ ರಾಷ್ಟ್ರವಾದಿ ಚಿಂತಕರು, ನಿಮ್ಮಂತೆ ಜಾತಿ ಓಲೈಕೆಯ ಸಂಕುಚಿತ ಮನಸ್ಸಿನ ನಾಯಕರಲ್ಲ. ರಾಷ್ಟ್ರೀಯತೆ ಏನೇಂಬುದೇ ನಿಮಗೆ ತಿಳಿದಿಲ್ಲ ಎಂದು ಡಾ.ಭರತ್ ಶೆಟ್ಟಿ ವೈ ತಿರುಗೇಟು ನೀಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಅತಿಯಾದ ಮುಸ್ಲಿಂ ಒಲೈಕೆಗೆ ಮುಂದಾಗಿರುವ ಜಮೀರ್ ಅಹ್ಮದ್ ಪ್ರಚಾರ ಬದಲು ತಮ್ಮ ಜಾತಿಯೇ ಮೇಲು ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ.
ಚಾಮರಾಜಪೇಟೆ, ಹುಬ್ಬಳ್ಳಿ ಮೈದಾನದ ಗಣೇಶೋತ್ಸವ ವಿವಾದದ ತುಪ್ಪ ಸುರಿದ,ಟಿಪ್ಪು ಜಯಂತಿಗೆ ಕುಮ್ಮಕ್ಕು, ಅಪರಾಧ ಕೃತ್ಯ ನಡೆಸಿದವರಿಗೆ ಬೆಂಬಲ ಇಂತಹ ಕೆಲಸ ಕಾರ್ಯಗಳಿಗೆ ಒತ್ತು ನೀಡುವ ಜಮೀರ್ ಅಹ್ಮದ್ ರಿಂದ ಬೇರೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ.
ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳಿಕೆ ಕೊಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷವೇ ಹೆಚ್ಚು ಕೋಮುವಾದಿ ನಾಯಕರನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳುವ ಕಾಲ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು