6:39 AM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಜನವರಿ 17 ರಿಂದ ಕನಾ೯ಟಕ ಕ್ರೀಡಾಕೂಟ: 25 ವಿಭಾಗಗಳಲ್ಲಿ ಸ್ಪರ್ಧೆ; 3247 ಕ್ರೀಡಾಪಟುಗಳು ಭಾಗಿ

12/01/2025, 13:46

ಮಂಗಳೂರು( reporterkarnataka.com): ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ – 2025 ರ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಕೋಕೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್ , ವೈಟ್ ಲಿಫ್ಟಿಂಗ್ ಹಾಗೂ ವುಶು ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಪ್ರತಿಯೊಂದು ಕ್ರೀಡೆಯಲ್ಲಿ ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಕ್ರೀಡೆಯಲ್ಲಿ ಹಲವು ವಿಭಾಗಗಳಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳ ಸ್ಪರ್ಧೆ ನಡೆಯಲಿದೆ ಎಂದು ಅವರು ನುಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿ. ಪಂ. ಸಿಇಒ ಡಾ. ಆನಂದ್ ಕೆ., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಾಕಿಮ್ ಸ್ಟಾನಿ, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಯು.ಎಚ್. ಉಮ್ಮರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು