ಇತ್ತೀಚಿನ ಸುದ್ದಿ
ಜ. 4: ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಕವಿಗೋಷ್ಠಿ, ದಫ್, ಬ್ಯಾರಿ ಹಾಡುಗಳ ಸಂಭ್ರಮ
02/01/2026, 18:31
ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ.
ಬೆಳಿಗ್ಗೆ 9.30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್‌ಬಿರ್ರ್ ಶಾಲಾ ವಠಾರದಿಂದ ಸಭಾಂಗಣದ ತನಕ ನಡೆಯಲಿರುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಜಿ ಎಂ. ಎಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸಲಿದ್ದು, ಬೆಳಿಗ್ಗೆ 10.00ಕ್ಕೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಧ್ವಜಾರೋಹಣ ನೆರವೇರಿಸಲಿದ್ದಾರೆ.
*ಉದ್ಘಾಟನಾ ಸಮಾರಂಭ:* ಬೆಳಿಗ್ಗೆ 10.15ಕ್ಕೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸಮ್ಮೇಳನ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹಾಗೂ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
*ಪುಸ್ತಕಗಳ ಬಿಡುಗಡೆ:* ಉದ್ಘಾಟನಾ ಸಮಾರಂಭದಲ್ಲಿ ಶಮೀಮಾ ಕುತ್ತಾರ್ ಅವರ ʼಪಡಿಞ್ಞಾರ್ರೊ ಪೂʼ (ಕಥಾ ಸಂಕಲನ), ಹಸೀನ ಮಲ್ನಾಡ್ ಅವರ ʼಮಿನ್ನಾಂಪುಲುʼ (ಹನಿಗವನ ಸಂಕಲನ), ಎನ್.ಎಂ. ಹನೀಫ್ ನಂದರಬೆಟ್ಟು ಅವರ ʼಸಂಪುಕಾತ್ʼ (ಕವನ ಸಂಕಲನ), ಬಶೀರ್ ಅಹ್ಮದ್ ಬೆಳ್ಳಾಯಿರು ಅವರ ʼಬೆಲ್‌ಚʼ (ಕವನ ಸಂಕಲನ) ಮತ್ತು ಹೈದರಲಿ ಕಾಟಿಪಳ್ಳ ಅವರ ʼನಸೀಅತ್ʼ (ಕವನ ಸಂಕಲನ) ಬ್ಯಾರಿ ಕೃತಿಗಳು ಬಿಡುಗಡೆಗೆಯಾಗಲಿವೆ.
*ಚರ್ಚಾಗೋಷ್ಠಿ:* ಮಧ್ಯಾಹ್ನ12.00ಕ್ಕೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷ್ಠಿಯಲ್ಲಿ ಪ್ರಾಧ್ಯಾಪಕ ಹೈದರ್ ಅಲಿ, ಪತ್ರಕರ್ತ ಏ.ಕೆ. ಕುಕ್ಕಿಲ, ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಭಾಗವಹಿಸ ಲಿದ್ದಾರೆ. ಮಂಗಳೂರು ವಿ.ವಿ. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ಚರ್ಚಾಗೋಷ್ಠಿ ನಿರೂಪಿಸಲಿದ್ದಾರೆ.
*ಬ್ಯಾರಿ ಕವಿಗೋಷ್ಠಿ, ದಫ್ ಮತ್ತು ಬ್ಯಾರಿ ಹಾಡುಗಳ ಸಂಭ್ರಮ:* ಮಧ್ಯಾಹ್ನ 2.00ಕ್ಕೆ ಹಿರಿಯ ಸಾಹಿತಿ ಮುಹಮ್ಮದ್ ಬಡ್ಡೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬ್ಯಾರಿ ಕವಿಗೋಷ್ಠಿಯಲ್ಲಿ ಬದ್ರುದ್ದೀನ್ ಕೂಳೂರು, ಖಲಂದರ್ ಬೀವಿ ಅಮಾನುಲ್ಲಾ, ಅಶ್ಫಾಕ್ ಅಹ್ಮದ್ ಕಾಟಿಪಳ್ಳ, ಶಾಹಿದಾ ಮಂಗಳೂರು, ಶಮೀಮ್ ಕುಟ್ಟಿಕಳ, ಅಸ್ಮತ್ ವಗ್ಗ, ನಾಫಿಲ ಶಬೀನ್ ಕೈಕಂಬ ಮತ್ತು ಮುಹಮ್ಮದ್ ಕುಂಞಿ ಮಾಸ್ಟರ್ ಅಡ್ಡೂರು ಕವನ ಮಂಡಿಸಲಿದ್ದಾರೆ. ಮಧ್ಯಾಹ್ನ 3.00ಕ್ಕೆ ಮೂಡಬಿದರೆಯ ಆಳ್ವಾಸ್ ಕಾಲೇಜಿನ ದಫ್ ತಂಡದಿಂದ ದಫ್ ಹಾಡು ಮತ್ತು ಬ್ಯಾರಿ ಹಾಡುಗಾರರ ತಂಡದಿಂದ ಹಾಡುಗಳ ಸಂಭ್ರಮವಿರಲಿದೆ.
*ಸಾಧಕರಿಗೆ ಸನ್ಮಾನ:*
ಸಂಜೆ 4.00ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿಅಬ್ದುಲ್ ಲತೀಫ್ ಗುರುಪುರ, ಪಾತುಞ್ಞಿ ಮೂಡುಶೆಡ್ಡೆ, ಎಂ.ಪಿ. ಉಸ್ಮಾನ್ ಮುಕ್ರಿಕ ಸೂರಲ್ಪಾಡಿ, ಸುಲೈಮಾನ್ ಗುರುಪುರ, ಸಲೀಕಾ ಸೂರಲ್ಪಾಡಿ, ಆರ್. ಎಸ್. ಅಶ್ರಫ್ ಸೂರಲ್ಪಾಡಿ, ಅಬ್ದುಲ್ ಶರೀಫ್ ಸಾಮರಸ್ಯ ನ್ಯೂಸ್ ಮತ್ತು ಮುಹಮ್ಮದ್ ನಝೀರ್ ಬಜ್ಪೆ ಸನ್ಮಾನ ಸ್ವೀಕರಿಸಲಿದ್ದಾರೆ.
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ದ.ಕ. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಕಸಪಾ ದ.ಕ. ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬ್ಯಾರಿ ಇನ್ಫೋ.ಕಾಂನ ಮುಖ್ಯಸ್ಥ ಬಿ.ಎ. ಮುಹಮ್ಮದ್ ಅಲಿ ಸಮಾರೋಪ ಭಾಷಣ ಮಾಡಲಿದ್ದು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
*ಬ್ಯಾರಿ ನಾಟಕ ಮತ್ತು ತಾಲೀಮು ಪ್ರದರ್ಶನ:* ಸಂಜೆ 6.30ರಿಂದ ರಾತ್ರಿ 8.00ರ ತನಕ ಚಲನಚಿತ್ರ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ʼಬ್ರೋಕರ್ ಪೋಕರ್ʼ ಬ್ಯಾರಿ ನಾಟಕ ಮತ್ತು ಗುರುಪುರದ ಎಂ.ಜಿ.ಎಂ. ತಾಲೀಮು ತಂಡದಿಂದ ತಾಲೀಮು ಪ್ರದರ್ಶನ ನಡೆಯಲಿದೆ.
*ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದವರು:*
ಉಮರ್ ಯು.ಹೆಚ್. (ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ),ಡಾl ಇ.ಕೆ.ಎ. ಸಿದ್ದೀಕ್ ಅಡ್ಡೂರು (ಅಧ್ಯಕ್ಷ, ಸಮ್ಮೇಳನ ಸ್ವಾಗತ ಸಮಿತಿ),ತಾಜುದ್ದೀನ್ ಅಮ್ಮುಂಜೆ (ಸದಸ್ಯ ಸಂಚಾಲಕ)ಯು. ಹೆಚ್. ಖಾಲಿದ್ ಉಜಿರೆ (ಸದಸ್ಯ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ)ಅನ್ಸಾರ್ ಕಾಟಿಪಳ್ಳ (ಸದಸ್ಯ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ)ಎಂ.ಜಿ. ಸಾಹುಲ್ ಹಮೀದ್ ಗುರುಪುರ (ಉಪಾಧ್ಯಕ್ಷ, ಸಮ್ಮೇಳನ ಸ್ವಾಗತ ಸಮಿತಿ)
ಸಲೀಂ ಹಂಡೇಲ್ (ಉಪಾಧ್ಯಕ್ಷ, ಸಮ್ಮೇಳನ ಸ್ವಾಗತ ಸಮಿತಿ)
ಅಬ್ದುಲ್ ಜಲೀಲ್ ಅರಳ (ಕಾರ್ಯದರ್ಶಿ, ಸಮ್ಮೇಳನ ಸ್ವಾಗತ ಸಮಿತಿ)ಎಂ.ಡಿ. ನವಾಝ್ (ಕಾರ್ಯದರ್ಶಿ, ಸಮ್ಮೇಳನ ಸ್ವಾಗತ ಸಮಿತಿ)












