ಇತ್ತೀಚಿನ ಸುದ್ದಿ
ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರಿಗೆ ಪ್ರೆಸ್ ಕ್ಲಬ್ ಗೌರವ ಪುರಸ್ಕಾರ
24/01/2024, 13:31
ಮಂಗಳೂರು(reporterkarnataka.com):ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಪ್ರೆಸ್ ಕ್ಲಬ್ ಗೌರವ ಪುರಸ್ಕಾರವನ್ನು ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರಿಗೆ ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಪ್ರದಾನ ಮಾಡಲಾಯಿತು.
ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ನಿರ್ಮೂಲನೆ ನಮ್ಮೆಲ್ಲರ ಹೊಣೆ, ಈ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಆದರೆ ಬೇರೆ ಜಾಗೃತಿಗಳಂತೆ ಅಲ್ಲ. ನಾವೆಲ್ಲ ಒಟ್ಟು ಸೇರಿ ಮಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪೊಸ ಕುರಲ್ ವಾರ್ತಾ ವಾಹಿನಿಯ ವ್ಯವಸ್ಥಾಪಕ ವಿದ್ಯಾಧರ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ ವಹಿಸಿದ್ದರು.
ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಅಧ್ಯಕ್ಷ ರಾಮಕೃಷ್ಣ ಆರ್.
ಮತ್ತಿತರರು ಉಪಸ್ಥಿತರಿದ್ದರು.