ಇತ್ತೀಚಿನ ಸುದ್ದಿ
ಜಾನಪದ ವಿದ್ವಾಂಸ, ಸಾಹಿತಿ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಇನ್ನಿಲ್ಲ: ನಾಳೆ ಅಂತ್ಯಕ್ರಿಯೆ
07/05/2024, 23:21
ಮಂಗಳೂರು(reporterkarnataka.com): ಜಾನಪದ ವಿದ್ವಾಂಸ, ಸಾಹಿತಿ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ನಿಧನರಾಗಿದ್ದಾರೆ.
ಅವರಿಗೆ ಪತ್ನಿ ಸುಮಾ ಆರ್. ಆಚಾರ್, ಪುತ್ರಿಯರಾದ ಕಿರಣ ಪಿ.ಆರ್., ಸುಪ್ರಿಯ ಪಿ.ಆರ್, ಪುತ್ರ ಹರ್ಷವರ್ಧನ ಪಿ.ಆರ್. ಹಾಗೂ ಅಪಾರ ಬಂಧು- ಮಿತ್ರರನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಅವರ ಮನೆಯಾದ ಪುತ್ತೂರು ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ.