ಇತ್ತೀಚಿನ ಸುದ್ದಿ
ಜನರ ಸಮಸ್ಯೆಗಳಿಗೆ ನೇರ ಪರಿಹಾರಕ್ಕೆ ಸಾರ್ವಜನಿಕರ ಭೇಟಿ: ಶಾಸಕ ವೇದವ್ಯಾಸ್ ಕಾಮತ್
18/06/2022, 09:43
ಮಂಗಳೂರು(reporterkarnataka.com): ಜನರ ಸಮಸ್ಯೆಗಳನ್ನು ನೇರವಾಗಿ ಪರಿಹರಿಸುವ ನಿಟ್ಟಿನಲ್ಲಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಮೂಲಕ ಪ್ರಯತ್ನಿಸುತ್ತೇನೆ. ಜನರು ತಮ್ಮ ಸಮಸ್ಯೆಯನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಲು ಸಾರ್ವಜನಿಕ ಭೇಟಿ ವೇದಿಕೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಕುರಿತು ಮಾತನಾಡಿದ ಅವರು, ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ನಿಟ್ಟಿನಲ್ಲಿ ಪಾಲಿಕೆಯಲ್ಲಿರುವ ನನ್ನ ಕಚೇರಿಯಲ್ಲಿ ಒಂದು ದಿನ ಕಳೆದಾಗ ಅನೇಕ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಜನರು ಬೇರೆ ಬೇರೆ ರೀತಿಯ ಸಮಸ್ಯೆಗಳನ್ನು ಹೇಳಿಕೊಂಡಾಗ ಅದನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.