10:07 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ

25/04/2024, 20:39

ಮಂಗಳೂರು(reporterkarnataka.com): ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬಗ್ಗೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ಗೆಲುವುಗಳನ್ನು ಕಂಡು ವಿಧಾನಸಭೆ ಸ್ಪೀಕರ್ ಸ್ಥಾನ ಅಲಂಕರಿಸುವ ವರೆಗೆ ಎತ್ತರಕ್ಕೆ ಬೆಳೆದ ಯು.ಟಿ.ಖಾದರ್ ಅವರ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ ಅವರ ಆಪ್ತ ಸಹಾಯಕ ಲಿಬ್‌ಝಿತ್ ಪ್ರಸಕ್ತ ಲೋಕಸಭೆ ಚುನಾವಣೆ ಬಗ್ಗೆ ರಿಪೋರ್ಟರ್ ಕರ್ನಾಟಕ ಜತೆ ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರ ಅಭಿಪ್ರಾಯ ಏನೆಂದು ಕೇಳೋಣ…
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸಾಮಾಜಿಕವಾಗಿ ತೊಡಗಿಸಿಕೊಂಡವರು ಹಾಗೂ ಜಾತಿ ಭೇದಗಳಿಲ್ಲದೆ ಹಿಂದುಳಿದವರಿಗೆ ಸಹಾಯ ಹಸ್ತ ಚಾಚಿದವರು. ಖಾದರ್ ಸರ್ ಅವರ ಹಾಗೆಯೆ ಜನರ ನಡುವೆ ಬೆರೆತು ಅವರಿಗಾಗಿ ಕೆಲಸ ಖಂಡಿತವಾಗಿ ಮಾಡುತ್ತಾರೆ.
ಹಾಗೆಯೆ ಪ್ರತಿಯೊಬ್ಬರಲ್ಲಿಯೂ ಹೊಸ ಭರವಸೆ ಮೂಡಿಸುವುದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ಕೊಡುಗೆ ಕೂಡ ನೀಡುತ್ತಾರೆ ಎನ್ನುವ ಭರವಸೆ ಇದೆ ಎಂದರು.
ಪಕ್ಷಾತೀತವಾಗಿ ಎಲ್ಲರೂ ಗೌರವಿಸುವ ಜನಾರ್ದನ ಪೂಜಾರಿ ಅವರ ಗರಡಿಯಲ್ಲಿ ಪಳಗಿದ ಪದ್ಮರಾಜ್ ಅವರು ಪೂಜಾರಿ ಅವರಂತೆಯೆ ಅಭಿವೃದ್ಧಿಯ ಹರಿಕಾರನಾಗಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು