4:59 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಜನರಿಗೆ ಮೂಲಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ: ಶಾಸಕ ವೇದವ್ಯಾಸ ಕಾಮತ್

25/11/2022, 21:28

ಮಂಗಳೂರು(reporterkarnataka.com): ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ, ಅದನ್ನು ನಮ್ಮ ಆಡಳಿತ ವ್ಯವಸ್ಥೆಯ ಮೂಲಕ ಪೂರ್ಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ನಗರದ ಕುಲಶೇಖರ ವೀರನಾರಾಯಣ ಕಟ್ಟೆಯ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ನಮ್ಮ ಆಡಳಿತದ ಮೇಲೆ ಸಂಪೂರ್ಣ ಭರವಸೆಯಿದೆ. ಜನರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ನಮ್ಮ ಸರಕಾರವು ಬದ್ಧವಾಗಿದೆ ಎಂದು ನುಡಿದರು.

ಮಂಗಳೂರು ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೋಟ್ಯಂತರ ರೂಪಾಯಿ ಅನುದಾನ ತರಲಾಗಿದೆ. ಹಂತ ಹಂತವಾಗಿ ಅನುದಾನಗಳನ್ನು ಬಳಸಿ ನಗರದ ಉನ್ನತೀಕರಣ ದೃಷ್ಟಿಯಿಂದ ಕಾರ್ಯ ನಿರ್ವಹಿಸಲಾಗುವುದು. ಮುಂಬರುವ ದಿನಗಳಲ್ಲಿ ದೇಶದ ಅಭಿವೃದ್ಧಿ ಹೊಂದಿದ ನಗರವಾಗಿ ಮಂಗಳೂರು ನಗರವು ರೂಪುಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ‌ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರ್ ಮೈೂಯ್ಲಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್ ಕುಲಶೇಖರ, ಮಂಜುಳಾ ರಾವ್, ವೀತು, ಅನಿಲ್ ರಾವ್, ಹರಿಣಿ ಪ್ರೇಮ್, ವಸಂತ್ ಆಚಾರ್ಯ, ಉದಯ್ ಚೌಕಿ, ಗೋಪಿಯಕ್ಕ, ಸುಶಾಂತ್ ಕೋಟಿಮುರ, ಯಶೋದ, ಅರುಣ್ ರಾವ್, ದಿನೇಶ್ ಜ್ಯೋತಿನಗರ, ಯೋಗಿಶ್ ಚೌಕಿ, ದಿನೇಶ್, ಅಶ್ವಿತ್ ಕೊಟ್ಟಾರಿ, ಭಾರತೀ, ಉಷಾ, ಮೆಲ್ವಿನ್, ನಾಗರಾಜ್ ಆಚಾರ್ಯ, ಪ್ರಾನ್ಸಿಸ್, ಯೋಗಿಶ್ ಚೌಕಿ, ಅಭಿಲಾಷ್, ಸಮರ್ಥ್, ಅಂಕಿತ್, ಲೋಕೇಶ್ ಚೌಕಿ, ಅಶ್ವಿನ್ ಅಮಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು