2:24 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಜನರಿಗೆ ವಿಶ್ವಾಸಾರ್ಹ, ವಸ್ತುನಿಷ್ಠ ವರದಿ ನೀಡುವ ಹೊಣೆಗಾರಿಕೆ ಮಾಧ್ಯಮಗಳ ‌ಮೇಲಿದೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಸಂಸದ ನಳಿನ್

21/11/2023, 20:15

ಮಂಗಳೂರು(reporterkarnataka.com): ವಿಶ್ವಾಸಾರ್ಹ ಹಾಗೂ ವಸ್ತು ನಿಷ್ಠ ವರದಿಯನ್ನು ಜನರಿಗೆ ನೀಡುವ ಮಹತ್ವದ ಹೊಣೆಗಾರಿಕೆ ಮಾಧ್ಯಮಗಳ ‌ಮೇಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಅತ್ಯಂತ ಮಹತ್ವದ ಪಾತ್ರವಿದೆ. ದ.ಕ. ಜಿಲ್ಲೆಯ ಪತ್ರಕರ್ತರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದೆ ಮಾತ್ರವಲ್ಲದೆ, ಮಾದರಿಯಾಗಿದೆ ಎಂದು ಸಂಸದರು ಸಂತಸ ವ್ಯಕ್ತಪಡಿಸಿದರು.
ಗ್ರಾಮೀಣ ಜನರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಪರಿಕಲ್ಪನೆ ಅದ್ಭುತವಾದದ್ದು. ಆ ಮೂಲಕ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯು ದೇಶದ ಪತ್ರಿಕಾ ರಂಗಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದು ಅವರು ಶ್ಲಾಘಿಸಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಶಾಸಕ ಡಿ. ವೇದವ್ಯಾಸ ಕಾಮತ್ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಹಸಿರು -ಉಸಿರು ಕಾರ್ಯಕ್ರಮಕ್ಕೆ ಶಾಸಕ ಡಾ.ವೈ.ಭರತ್ ಶೆಟ್ಟಿ ಚಾಲನೆ ನೀಡಿದರು‌. ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಉದ್ಘಾಟಿಸಿದರು‌.





ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಮ್ಮೇಳನದ ಕಿಟ್ ಬಿಡುಗಡೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬ್ಯಾಂಕ್ ಆಫ್ ಬರೋಡಾದ ಮಹಾ ಪ್ರಬಂಧಕರು ಮತ್ತು ವಲಯ ಮುಖಸ್ಥರಾದ ಗಾಯತ್ರಿ, ದ.ಕ.ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತಾ ಶೆಟ್ಟಿ, ಅನಘ ರಿಫೈನರೀಸ್ ಮಂಗಳೂರು ಇದರ ಆಡಳಿತ ನಿರ್ದೇಶಕ ಸಾಂಬಶಿವರಾವ್, ಕ್ರೆಡಾಯಿ ಮಂಗಳೂರು ಅಧ್ಯಕ್ಷ ವಿನೋದ್ ಎ.ಆರ್.ಪಿಂಟೊ, ಅತಿಥಿಗಳಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ಆನಂದ ಶೆಟ್ಟಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ , ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ಮಾಡಿದರು.
ಮಂಗಳೂರು ಪ್ರೆಸ್ ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸ್ವಾಗತಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸತೀಶ್ ಇರಾ ಪ್ರಾರ್ಥನೆ ಹಾಡಿದರು, ಮಹಮ್ಮದ್ ಆರಿಫ್ ಪಡುಬಿದ್ರೆ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿದರು. ಪತ್ರಕರ್ತ ದಿನೇಶ್ ಇರಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು