8:21 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

01/02/2025, 21:43

ಮಂಗಳೂರು(reporterkarnataka.com): ಕೇಂದ್ರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
12 ಲಕ್ಷ ರೂ.ವರೆಗೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ. ಕಳೆದ 10 ವರ್ಷಗಳಿಂದಲೂ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಬಡವರು, ರೈತರು, ಯುವಕರು, ಮಹಿಳೆಯರ ಬಾಳು ಹಸನಾಗಿಸುವ ಮಹತ್ವದ ಯಾವುದೇ ಯೋಜನೆಗಳಲ್ಲಿಲ್ಲ. ನಮ್ಮಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇಲ್ಲಿನ ಸಂಸದರು ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಅವರು ಆಯ್ಕೆಯಾಗಿದ್ದರೂ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು