2:24 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಬಿ.ಸಿ.ರೋಡಿನಲ್ಲಿ ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ ಸಚಿವ ಮಹಾದೇವಪ್ಪ

21/01/2024, 19:49

ಬಂಟ್ವಾಳ(reporterkarnataka.com): ಸಂವಿಧಾನದ 75 ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26 ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.
ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾ. ಬಿ.ಸಿ. ರೋಡ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನ ಜಾಥಾ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.
ಶೋಷಿತರಿಗೆ, ಅವಕಾಶ ವಂಚಿತರಿಗೆ ಅಂಬೇಡ್ಕರ್ ಅವರು ಪ್ರೇರಣಾ ಶಕ್ತಿಯಾಗಿದ್ದಾರೆ. ವೈಚಾರಿಕ ಆಲೋಚನೆಗಳ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕು. ಭಾರತವು ಬಹುತ್ವದ ರಾಷ್ಟ್ರವಾಗಿದ್ದು, ವೈವಿಧ್ಯತೆಯಲ್ಲಿ ಏಕತೆ ಇರುವ ನೆಲವಾಗಿದೆ. ಸಂವಿಧಾನವನ್ನು ನಾವು ರಕ್ಷಿಸಿದರೆ, ನಮ್ಮನ್ನು ಸಂವಿಧಾನವು ರಕ್ಷಿಸಲಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಪ್ರಯತ್ನಗಳ ವಿರುದ್ಧ ನಾವು ಜಾಗೃತರಾಗಬೇಕಿದೆ. ಆದರೆ, ಇಂದು ಸಂವಿಧಾನವು ಅಪಾಯದತ್ತ ಸಾಗುತ್ತಿದೆ ಎಂದು ಸಚಿವರು ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ರಮಾ‌ನಾಥ ರೈ, ವಿನಯಕುಮಾರ್ ಸೊರಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲಿನಿ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು