8:30 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಜಪಾನ್ ಪ್ರಬಲ ಭೂಕಂಪ: 55ಕ್ಕೂ ಹೆಚ್ಚು ಸಾವು; 1 ಲಕ್ಷಕ್ಕೂ ಅಧಿಕ ಮಂದಿಯ ಸ್ಥಳಾಂತರ

03/01/2024, 11:13

ಟೊಕಿಯೊ(reporterkarnataka.com): ಜಪಾನ್​ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ 55ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 1 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.
ಜಪಾನ್ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಪ್ರಮುಖ ರಸ್ತೆಗಳು ಬಾಯಿ ಬಿಟ್ಟಿವೆ. ಆದರೆ ಅದೃಷ್ಟವಶಾತ್ ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆ.
100ಕ್ಕೂ ಅಧಿಕ ಬಾರಿ ಭೂಮಿ ಕಂಪಸಿರುವುದರಿಂದ ಜನರು ಭಯಭೀತರಾಗಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.
ವಾಜಿಮಾ ಬಂದರು ಪ್ರದೇಶದಲ್ಲಿ ಆರಂಭದಲ್ಲೇ 13 ಜನರು ಸಾವನ್ನಪ್ಪಿದ್ದರು. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು