ಇತ್ತೀಚಿನ ಸುದ್ದಿ
ಜಪಾನಿನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲು; ಸುನಾಮಿ ಎಚ್ಚರಿಕೆ
02/01/2024, 11:35
ಟೊಕಿಯೊ(reporter Karnataka.com): ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ನಾಶವಾಗಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದೆ.
ಭೂಕಂಪದಿಂದ ಈಗಲಾಗಲೇ ಡಜನಿಗೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.
ವಾಜಿಮಾ ಬಂದರು ಪ್ರದೇಶದಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು. ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.