7:49 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜಪಾನಿನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲು; ಸುನಾಮಿ ಎಚ್ಚರಿಕೆ

02/01/2024, 11:35

ಟೊಕಿಯೊ(reporter Karnataka.com): ಜಪಾನ್​ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ನಾಶವಾಗಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದೆ.
ಭೂಕಂಪದಿಂದ ಈಗಲಾಗಲೇ ಡಜನಿಗೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.


ವಾಜಿಮಾ ಬಂದರು ಪ್ರದೇಶದಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು. ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು