12:02 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಜೆಪ್ಪಿನಮೊಗರು ಬಳಿಯ ಗುಜರಿ ಯಾರ್ಡ್‌ನಲ್ಲಿ ತಡರಾತ್ರಿ ಅಗ್ನಿ ಅನಾಹುತ: ಗೋಡಾನ್ ಸಂಪೂರ್ಣ ಭಸ್ಮ

27/01/2025, 13:24

ಮಂಗಳೂರು(reporterkarnataka.com): ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್‌ನಲ್ಲಿ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಗೋಡಾನ್ ಸಂಪೂರ್ಣ ಸುಟ್ಟು ಹೋಗಿದೆ.
ಜೆಪ್ಪಿನಮೊಗರು ಯೇನಪೊಯ ಶಾಲೆಯ ಸಮೀಪದ ಕುಡುಪಾಡಿಗೆ ಹೋಗುವ ರಸ್ತೆಯಲ್ಲಿರುವ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್‌ ಇದೆ. ಇಲ್ಲಿ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಶಾಸಕ ವೇದವ್ಯಾಸ ಕಾಮತ್ ಕೂಡಲೇ ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಿಸಿದ್ದಾರೆ. ಪಾಂಡೇಶ್ವರ ಅಗ್ನಿ ಶಾಮಕ ದಳದ ಸುಮಾರು 6ರಷ್ಟು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತಂದಿದೆ.


ಶಾಸಕ ವೇದವ್ಯಾಸ ಕಾಮತ್ ಜೊತೆಗೆ ಸ್ಥಳೀಯ ಕಾರ್ಪೊರೇಟರ್‌ಗಳಾದ ವೀಣಮಂಗಳ, ಭರತ್ ಕುಮಾರ್ ಎಸ್, ಶೈಲೇಶ್ ಶೆಟ್ಟಿ ‌ಬೆಂಕಿ ನಂದಿಸುವವರೆಗೆ ಸ್ಥಳದಲ್ಲಿ ಮೊಕ್ಕಂ ಹೂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು