3:51 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ಆತ್ಮಶಕ್ತಿ ಬೆಂದೂರುವೆಲ್ ಶಾಖೆಯ ವತಿಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ಮತ್ತು ದಂತ ಚಿಕಿತ್ಸಾ ಶಿಬಿರ

11/02/2026, 20:46

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂವೆಲ್ ಶಾಖೆಯ 14ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಂಗಳೂರಿನ ಜಪ್ಪಿನಮೊಗರು ಗುರುಮಂದಿರದ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಎನ್. ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ , ಕದ್ರಿ ಮಂಗಳೂರು ಹಾಗೂ ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ , ಮುಕ್ಕ , ಸುರತ್ಕಲ್ , ಮಂಗಳೂರು ಇದರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ನಗರದ ಜಪ್ಪಿನಮೊಗರು ಕಂರ್ಭಿಬೈದೇದಿ ಚಾವಡಿ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಕಂಕನಾಡಿ ಗರೋಡಿ ಬ್ರಹ್ಮಶ್ರೀ ಬೈದರ್ಕಳ ಕ್ಷೇತ್ರದ ಮೋಕ್ತಸರರಾದ ಶ್ರೀ ಚಂದ್ರನಾಥ್ ಅತ್ತಾವರ ಉದ್ಘಾಟಿಸಿ ಮಾತನಾಡಿ, “ಉತ್ತಮ ಆರೋಗ್ಯವನ್ನು ನಮಗೆ ದೇವರು ಕರುಣಿಸುತ್ತಾರೆ ಎಂಬುದು ನಮ್ಮ ನಂಬಿಕೆ. ಆದರೆ ಈ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರ ಬಹಳ ಮುಖ್ಯವಾಗಿದೆ. ಉತ್ತಮವಾದ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಆಗಿರುವುದರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಇಂತಹ ಶಿಬಿರಗಳು ಆಯೋಜಿಸುತ್ತಿರುವುದು ತುಂಬಾ ಪ್ರಯೋಜನಕಾರಿಯಾಗಿದೆ. ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯಿರಿ ಎಂದು ತಿಳಿಸಿದರು.
ಮಹಾನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯರಾದ ಶ್ರೀಮತಿ ವೀಣಾ ಮಂಗಳ ರವರು ಮಾತಾನಾಡಿ “ಈ ಕಾರ್ಯಕ್ರಮದ ಉಪಯೋಗವನ್ನು ಎಲ್ಲರು ಪಡೆಯಬೇಕು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಸಹಭಾಗಿ ಸಂಸ್ಥೆಯವರು ಒಟ್ಟು ಸೇರಿ ನಮ್ಮೂರ ಜನರ ಆರೋಗ್ಯದ ಸಮಸ್ಯೆಗಳಿಗೆ ಹತ್ತಿರದಲ್ಲೇ ಪರಿಹಾರ ಸಿಗಬೇಕೆನ್ನುವ ಉದ್ದೇಶದಲ್ಲಿ ಆಯೋಜಿಸುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದು ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಉದ್ದೇಶಕ್ಕಾಗಿ, ಜನರ ಆರೋಗ್ಯದ ದೃಷ್ಟಿಯಲ್ಲಿ ಎಲ್ಲಾ ಕಡೆಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದೇವೆ, ನಮ್ಮ ಆರೋಗ್ಯದ ಬಗ್ಗೆ ಮುಂಜಾಗೃತ ವಹಿಸಿದರೆ ನಮ್ಮ ಆರೋಗ್ಯ ಒಳ್ಳೆಯ ರೀತಿಯಲ್ಲಿರುತ್ತದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನೂ ಇಂತಹ ಶಿಬಿರಗಳನ್ನು ಆಯೋಜಿಸಲು ಸಹಕಾರವನ್ನು ಕೋರಿದರು. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ವೈದ್ಯರು, ಕೈ ಜೋಡಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ನತೆಯನ್ನು ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಪ್ಪಿನಮೊಗರು
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಮನೋಜ್ ಪೂಜಾರಿ ರವರು ವಹಿಸಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಗೋಪಾಲ್ ಎಂ., ಪಿಲಿಚಾಮುಂಡಿ ಕ್ಷೇತ್ರ , ಪಿಲಿಚಂಡಿ ಪಾದೆ ತಂದೋಳಿಗೆ ಇದರ ಅಧ್ಯಕ್ಷರಾದ ಶ್ರೀ ಹರಿಶ್ಚಂದ್ರ ತಂದೋಳಿಗೆ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸತೀಶ್ , ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ , ಮುಕ್ಕ , ಸುರತ್ಕಲ್ ಇಲ್ಲಿನ ವೈದ್ಯರಾದ ಡಾ| ಆದ್ರಾ ಮತ್ತು ಮಂಗಳ ಕಾಲೇಜು , ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ , ಕದ್ರಿ ಮಂಗಳೂರು ಇಲ್ಲಿನ ಎಂ.ಎಸ್.ಡಬ್ಲೂ÷್ಯ ವಿದ್ಯಾರ್ಥಿ ಸುಷ್ಮಾ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಪದಾಧಿಕಾರಿಗಳು ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 110ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಹಾಗೂ ಉಚಿತ ಔಷಧಿ ವಿತರಣೆಯನ್ನು ನಡೆಸಲಾಯಿತು ಹಾಗೂ ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಯನ್ನು ಮಾಡಲಾಯಿತು.
ಈ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಚಂದ್ರಹಾಸ್ ಕಟ್ಟಪುಣಿ ಯವರು ಸ್ವಾಗತಿಸಿದರು. ಕೋಶಾಧಿಕಾರಿ ಶ್ರೀ ಚಿತಾಕ್ಷ ಪೂಜಾರಿ ಯವರು ವಂದಿಸಿದರು. ಸಂಘದ ಸದಸ್ಯರಾದ ಶ್ರೀ ಅಶೋಕ್ ತಂದೋಳಿಗೆ ಯವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು