4:27 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಜಮ್ಮು- ಕಾಶ್ಮೀರ ಶಾಂತಿಯುತ ಚುನಾವಣೆ ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿ ಹೆಚ್ಚಿಸಿದೆ: ಮೋಹನ್ ಭಾಗವತ್

12/10/2024, 18:04

ನಾಗಪುರ(reporterkarnataka.com): ಜಮ್ಮು- ಕಾಶ್ಮೀರದಲ್ಲಿ ಶಾಂತಿಯುತವಾಗಿ ಚುನಾವಣೆ ಪೂರ್ಣಗೊಂಡಿದ್ದು, ಇದು ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿಯನ್ನು ಹೆಚ್ಚಿಸಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು.
ಅವರು ನಾಗ್ಪುರದ ಆರೆಸ್ಸೆಸ್ ಪ್ರಧಾನ ಕಚೇರಿಯಲ್ಲಿ ವಿಜಯ ದಶಮಿ ಆಚರಣೆಯನ್ನು ಉದ್ದೇಶಿಸಿ ಮಾತನಾಡಿದರು.
ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ
ವೈದ್ಯೆಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು
ನಾಚಿಕೆಗೇಡಿನ ಸಂಗತಿ.
ಆದರೆ ಇದು ಒಂದೇ ಒಂದು ಘಟನೆಯಲ್ಲ.. ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಭಾರತ ವಿರೋಧಿ ಪ್ರಚಾರ ಬಾಂಗ್ಲಾದೇಶದಲ್ಲಿ ನಡೆಯುತ್ತಿಧ. ಬಾಂಗ್ಲಾವು ಪಾಕಿಸ್ತಾನದೊಂದಿಗೆ ತನ್ನನ್ನು ಹೊಂದಿಸಿಕೊಳ್ಳಲು ಕಾರಣವಾಗುತ್ತದೆ. ನೆರೆಯ ದೇಶದಲ್ಲಿ ನಡೆಯುತ್ತಿರುವ ಹಿಂದೂ ವಿರೋಧಿ ಹಿಂಸಾಚಾರ ಕಳವಳಕಾರಿ ಎಂದರು.
ಬಾಂಗ್ಲಾ ದೇಶದಲ್ಲಿ, ಭಾರತದಿಂದ ನಮಗೆ ಬೆದರಿಕೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಯಾವತ್ತೂ ಭಾರತ ಈ ಕೆಲಸ ಮಾಡಿಲ್ಲ. ಇದು ಅಲ್ಲಿನ ಕೆಲ ಮೂಲಭೂತವಾದಿಗಳು ಸೃಷ್ಟಿಸಿರುವುದಾಗಿದೆ. ಇದರ ಬಗ್ಗೆ ಎಲ್ಲರೂ ಜಾಗೃತರಾಗಬೇಕಿದೆ ಎಂದು ನುಡಿದರು.
ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಅದು ಎಷ್ಟು ವ್ಯಾಪಕವಾಗಬಹುದು ಮತ್ತು ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಜಾಗತಿಕ ಬಿಕ್ಕಟ್ಟುಗಳು ಏನನ್ನು ಉಂಟುಮಾಡಬಹುದು ಎಂಬುದರ ಕುರಿತು ಕಳವಳವನ್ನು ಉಂಟುಮಾಡುತ್ತದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು