12:23 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

17/01/2025, 23:31

ಮಂಗಳೂರು(reporterkarnataka.com): ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.


*ಜಾತಿ ಗಣತಿ ವರದಿಗೆ ವಿರೋಧ ಏಕೆ;?*
ಪ್ರತಿಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು.
ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.
*ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ:* ಉಳ್ಳಾಲದಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು