9:24 AM Saturday24 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು