5:29 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಜಾತ್ರೆಗೆ ಬಂದ ಯುವಕರ ಮೇಲೆ ಚೂರಿ ದಾಳಿ: ಓರ್ವ ಸಾವು; ಇನ್ನೊಬ್ಬ ಗಂಭೀರ ಗಾಯ

23/12/2022, 11:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ಆಗಮಿಸಿದ್ದ ಇಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆಗೈದಿದ್ದರಿಂದ ಓರ್ವ ಸಾವಿಗೀಡಾಗಿ, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.

ಅಥಣಿ ಪಟ್ಟಣದವರಾದ ಗಣೇಶ ಪಂಡಿತ ಸಿಕ್ಕಲಗಾರ (23) ಮೃತನಾಗಿದ್ದು, ನರೇಂದ್ರ ಸಂಜಯ ಘಟಕಾಂಬಳೆ (32) ಗಂಭೀರ ಗಾಯಗೊಂಡಿದ್ದಾರೆ. ಗ್ರಾಮದ ಪಾಟಣಕರ ಗದ್ದೆಯ ಬಸ್‌ ನಿಲ್ದಾಣದ ಹಿಂದುಗಡೆ ಘಟನೆ ಜರುಗಿದೆ. ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡ ಗಣೇಶ ಹಾಗೂ ನರೇಂದ್ರ ಚೀರಾಡುತ್ತಾ ಗದ್ದೆಯಲ್ಲಿ ಬಿದ್ದಿರುವ ಸಪ್ಪಳ ಕೇಳಿಸಿಕೊಂಡ, ಅಲ್ಲಿನ ನಿವಾಸಿಗಳು ಆಂಬುಲೆನ್ಸ್ ವಾಹನಕ್ಕೆ ಕರೆ ಮಾಡಿದ್ದಾರೆ. ನಂತರ ಕೊಕಟನೂರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಅಲ್ಲಿಂದ ಕರೆದೊಯ್ದು ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗಲೇ ಗಣೇಶ ಸಿಕ್ಕಲಗಾರ ಸಾವಿಗೀಡಾಗಿದ್ದಾನೆ. ಗಾಯಗೊಂಡ ನರೇಂದ್ರನನ್ನು ಅಥಣಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಕುರಿತು ಐಗಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಮಹಾನಿಂಗ ನಂದಗಾಂವಿ, ಅಥಣಿ ಡಿವೈಎಸ್‌ಪಿ ಶ್ರೀಪಾದ ಜಲ್ಲೆ, ಸಿಪಿಐ ರವೀಂದ್ರ ನಾಯ್ಕಡಿ, ಪಿಎಸ್‌ಐಗಳಾದ ಶಿವರಾಜ ಧರಿಗೋಣ, ಶಿವಾಜಿ ಪವಾರ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು