6:44 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಜಗತ್ತಿನ ನಿದ್ದೆಗೆಡಿಸಿದ ಹೊಸ ರೂಪಾಂತರಿತ ‘ಓಮಿಕ್ರಾನ್’ : ಇದರ ಸಂಪೂರ್ಣ ಮಾಹಿತಿ ಇಲ್ಲಿದೆ!

27/11/2021, 22:05

ಕೇಪ್ಟೌನ್(reporterkarnataka.com) : ಇಡೀ ಜಗತ್ತಿನಲ್ಲಿ ಕೊರೊನಾ ಭೀತಿ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಹೊಸ ವೈರಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ ಓಮಿಕ್ರಾನ್’ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಸಿಂಗಾಪುರ ಹೇಳಿದೆ.

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮಿಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ದಕ್ಷಿಣ ಅಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಾಣುವಿನ ಹೊಸ ತಳಿಯ ವಿರುದ್ಧ ಕೋವಿಡ್‌-19 ತಡೆ ಲಸಿಕೆಗಳು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಇದೆ. ಈ ತಳಿಯ ವೈರಾಣು ಆಫ್ರಿಕಾ ಖಂಡದಿಂದಾಚೆಗೆ ಈಗಾಗಲೇ ಹರಡಿರುವ ಅಪಾಯವಿದೆ. ಇದನ್ನು ನಿಯಂತ್ರಿಸದೇ ಇದ್ದರೆ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇದೆ’ ಎಂದು ಬ್ರಿಟನ್‌ನ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್‌, ಬೆಲ್ಜಿಯಂ ಮತ್ತು ಹಾಂಗ್‌ಕಾಂಗ್‌ನಲ್ಲಿ ಈ ತಳಿಯ ವೈರಾಣು ತಗುಲಿರುವ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ

ಈ ತಳಿಯ ವೈರಾಣು ಪತ್ತೆಯಾಗಿರುವ ಆಫ್ರಿಕಾದ ಆರು ರಾಷ್ಟ್ರಗಳಿಂದ ವಿಮಾನ ಸಂಚಾರವನ್ನು ಹಲವು ದೇಶಗಳು ನಿಷೇಧಿಸಿವೆ. ಬ್ರಿಟನ್, ಜರ್ಮನಿ ಮತ್ತು ಇಟಲಿ ಈ ದೇಶಗಳಿಗೆ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ನಂತರ, ಮಲೇಷ್ಯಾ, ಸಿಂಗಪುರ, ಇಸ್ರೇಲ್ ಇದನ್ನೇ ಅನುಸರಿಸಿದವು. ಆನಂತರ ಐರೋಪ್ಯ ಒಕ್ಕೂಟವೂ ಈ ದೇಶಗಳಿಗೆ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು