6:25 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಜಯಾನಂದ ಪೆರಾಜೆ, ಡಾ. ಕೆ. ಜಿ ವೆಂಕಟೇಶ್, ಉಳಿಯತ್ತಡ್ಕ ಸಹಿತ 11 ಮಂದಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ: ಅ.6ರಂದು ಪ್ರದಾನ

05/10/2024, 10:28

ಕಾಸರಗೋಡು(reporterkarnataka.com): ಇಲ್ಲಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಪಾಂಗೋಡು ಶ್ರೀ ದುರ್ಗಾಪಮೇಶ್ವರಿ ಸಾಂಸ್ಕೃತಿಕ ಘಟಕ, ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್, ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಕಾರದಲ್ಲಿ ನಡೆಯುವ ಕಾಸರಗೋಡು ದಸರಾ ಕವಿಶ್ರೇಷ್ಠ ಪ್ರಶಸ್ತಿ- 2024 ಪ್ರದಾನ ಸಮಾರಂಭವು ಅ.6ರಂದು ಅಪರಾಹ್ನ 2ರಿಂದ ನಡೆಯಲಿದೆ.
ಈ ಪ್ರಶಸ್ತಿಗೆ ಹಿರಿಯ ಕವಿಗಳಾದ ಡಾ. ಕೆ. ಜಿ ವೆಂಕಟೇಶ್, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಪಿ. ವಿ ಪ್ರದೀಪ್ ಕುಮಾರ್, ಮಂಗಳೂರು, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಲಕ್ಷ್ಮೀ ವಿ ಭಟ್ ಮಂಜೇಶ್ವರ, ಜಯಾನಂದ ಪೆರಾಜೆ, ನಾಟಕ ಭಾರ್ಗವ ಕೆಂಪರಾಜು, ವಿರಾಜ್ ಅಡೂರು, ಸೀತಾಲಕ್ಷ್ಮಿ ವರ್ಮ ವಿಟ್ಲ, ಶಾಂತಾ ಪುತ್ತೂರು, ರತ್ನಾ ಕೆ ಭಟ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು