8:02 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯಕ್ಕೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ತನ್ನದೇ ಆದ ಕೊಡುಗೆ ನೀಡಿದೆ: ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ

20/11/2025, 22:58

ಮಂಗಳೂರು(reporterkarnataka.com): ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿ ಕಳೆದ 25 ವರ್ಷದಿಂದ ಜೆಡಿಎಸ್ ಪಕ್ಷ ತನ್ನದೇ ಕೆಲಸ ಮಾಡಿದ್ದು, ತನ್ನದೇ ಆದ ಕೊಡುಗೆಯನ್ನು ನೀಡಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಹೇಳಿದರು.
ನಗರದಲ್ಲಿ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು.
ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿ ರಾಜಕೀಯಕ್ಕೆ ಬಂದರೂ, ಸಾಕಷ್ಟು ಏಳು ಬೀಳುಗಳನ್ನು ಕಂಡು, ಬೇರೆ ಬೇರೆ ಚಿಹ್ನೆಗಳಿಂದ ಗುರುತಿಸಿಕೊಂಡು ಬಳಿಕ ಅಂತಿಮವಾಗಿ ತೆನೆಹೊತ್ತ ಮಹಿಳೆಯ ಚಿಹ್ನೆಯಿಂದ ಸ್ಪರ್ಧಿಸುತ್ತ, ಕಳೆದ 25 ವರ್ಷದಲ್ಲಿ ಸಮಾಜದಲ್ಲಿ ತನ್ನನ್ನು ಗುರುತಿಸಿಕೊಂಡಿದೆ ಎಂದರು.

ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗಿನಿಂದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವ ತನಕ ನೆಲ-ಜಲ-ಕನ್ನಡವನ್ನು ಅಸ್ತಿತ್ವದಲ್ಲಿ ಇಟ್ಟುಕೊಂಡು, ಬೇರೆ ಪಕ್ಷದೊಂದಿಗೆ ಸಮಿಶ್ರ ಸರ್ಕಾರವನ್ನು ರಚಿಸಿದರೂ, ತಾನು ಹಾಕಿಕೊಂಡ ಲಕ್ಷ್ಮಣ ರೇಖೆಯನ್ನು ದಾಟದೇ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗ್ರಾಮ ವಾಸ್ತವ್ಯ, ಸರ್ಕಾರವನ್ನು ಗ್ರಾಮಕ್ಕೆ ಕೊಂಡೋದವರು, ಗುಡಿಸಿಲಿನ ಬಳಿಗೆ ಸರ್ಕಾರ ಎಂಬ ಯೋಜನೆಗಳ ಮೂಲಕ ಹೊಸ ಅದ್ಯಾಯವನ್ನು ಪ್ರಾರಂಭಿಸಿದರು. ರೈತರ ಲಕ್ಷ-ಲಕ್ಷ ಸಾಲ ಮನ್ನಾ, ಪ್ರಾಕೃತಿಕ ವಿಕೋಪದಿಂದ ಮನೆಕಳೆದುಕೊಂಡವರಿಗೆ ಉತ್ತಮ ಮನೆ, ಕೆಪಿಎಲ್ ಶಾಲೆಗಳನ್ನು ಪ್ರಾರಂಭಿಸಿ, ಒಂದೇ ಸೂರಿನಡಿಯಲ್ಲಿ ಕೆ.ಜಿ. ಇಂದ ಹಿಡಿದು ಪಿಯುಸಿ ತನಕ ಕಲಿಯಲು ಅವಕಾಶ, ಮಕ್ಕಳಿಗೆ ಸ್ವಿಮ್ಮಿಂಗ್ ಫೂಲ್‌ಗಳನ್ನು ತೆರೆದು ಪ್ರತೀ ಹೋಬಳಿಗೆ ಒಂದೊಂದು ಶಾಲೆಯನ್ನು ಪ್ರಾರಂಭಿಸಿದರು. ಆದರೆ ಈಗಿನ ಸರ್ಕಾರ ಅಲ್ಲಿ ಕೆಲಸ ಮಾಡುವವರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ದೂರಿದರು.
ಕುಮಾರಸ್ವಾಮಿ ಅವರು ಅಲ್ಲಲ್ಲಿ ಪ್ರಥಮ ದರ್ಜೆ ಕಾಲೇಜುಗಳು, ಮಹಿಳಾ ಪ್ರಧಮ ದರ್ಜೆ ಕಾಲೇಜುಗಳು, ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕೆ, ಹಾಲಿಗೆ 5 ರೂ. ಪ್ರೋತ್ಸಾಹ ದನ ಹೆಚ್ಚಳ, ಗ್ರಾಮೀಣ ಪ್ರದೇಶದಲ್ಲಿ ನದಿ, ತೋಡು ದಾಟಿ ಬರುವ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೇತುಬಂಧು ಅಭಿಯಾನದಡಿ ಸೇತುವೆ ನಿಮಾಣ ಮೊದಲಾದ ಕಾರ್ಯಕ್ರಮಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.
ಪ್ರಮುಖರಾದ ಮೊಹಮದ್ ಕುಂಞ, ಪವನ್‌ಚಂದ್ರ, ವಸಂತ ಪೂಜಾರಿ, ಇಕ್ಬಲ್ ಮುಲ್ಕಿ, ಅಕ್ಷಿತ್ ಸುವರ್ಣ, ಹೈದರ್ ಪಾರ್ಥ್ಯಪಾಡಿ, ವಿನ್ಸಂಟ್ ಪಿರೇರಾ, ಯತೀಶ್ ಸುವರ್ಣ, ಕನಕದಾಸ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು