10:12 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

30/06/2025, 22:29

*ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಬುರುಡೆ ಬಿಡೋದು ನಿಲ್ಲಿಸಬೇಕು: ಸಿಎಂ*

*ನೀರಾವರಿಗೆ ಈ ಸರ್ಕಾರ 25 ಸಾವಿರ ಕೊಟ್ಟಿದ್ದೇವೆ. ಬೇರೆ ಯಾವ ಸರ್ಕಾರವಾದರೂ ಕೊಟ್ಟಿತ್ತಾ : ಸಿ.ಎಂ ಪ್ರಶ್ನೆ*

*ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ: ವೇದಿಕೆಯಿಂದಲೇ ಆದೇಶ ನೀಡಿದ ಸಿಎಂ*

*ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ: ಸಿಎಂ*

*2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿ.ಎಂ ಸ್ಪಷ್ಟ ಘೋಷಣೆ*

ಕೆಆರ್ ಎಸ್ (reporterkarnataka.com): ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.


ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ , ಡಿಸಿಎಂ ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು.
ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.
ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.
ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 TMC ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ಅಣಕಿಸಿದರು.
ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಟೀಕಿಸಿದರು.
ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.
ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.
ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಅವರು ನುಡಿದರು.
ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.
ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು