ಇತ್ತೀಚಿನ ಸುದ್ದಿ
ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ: ಜಿಲ್ಲೆಯ 8 ಕ್ಷೇತ್ರದಲ್ಲೂ ಸ್ಪರ್ಧೆ
07/01/2023, 11:03

ಮಂಗಳೂರು(reporterkarnataka.com): ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ ಆಗಮಿಸಲಿದೆ ಎಂದು ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾಕೆ ಮಾಧವಗೌಡ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ವಾಹನ ಜಾಗೃತಿ ಜಾಥಾ ನಡೆಸಲಾಗುತ್ತಿದೆ. ರಾಜ್ಯದಲ್ಲಿ 123 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸುವ ಗುರಿಯನ್ನು ಜೆಡಿಎಸ್ ಹೊಂದಿದೆ. ಜೆಡಿಎಸ್‌ನ ಪಂಚರತ್ನ ಯೋಜನೆಯು ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ, ವಸತಿ ಮತ್ತು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ನುಡಿದರು.
ದಕ್ಷಿಣ ಕನ್ನಡದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ನಡೆಸಿ ಎರಡರಿಂದ ಮೂರು ಹೆಸರನ್ನು ಚುನಾವಣೆಗೆ ಸ್ಪರ್ಧಿಸಲು ಆಯ್ಕೆ ಮಾಡುತ್ತಿದ್ದೇವೆ. ಅಭ್ಯರ್ಥಿಗಳ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಗ್ರಾಮೀಣ ಭಾಗದ ಜನರು ಪಕ್ಷದ ಬಗ್ಗೆ ಅಭಿಮಾನ ಹೊಂದಿದ್ದಾರೆ ಎಂದರು.
ದ.ಕ.ಘಟಕದ ಪದಾಧಿಕಾರಿಗಳನ್ನು ಪುನರ್ ರಚಿಸಲಾಗಿದೆ. ಸುಶೀಲ್ ನೊರೊನ್ಹಾ (ವಕ್ತಾರರು), ನಜೀರ್ ಉಳ್ಳಾಲ್ (ಕಾರ್ಯಾಧ್ಯಕ್ಷರು), ವಸಂತ ಪೂಜಾರಿ (ಕಾರ್ಯಾಧ್ಯಕ್ಷರು), ಇಕ್ಬಾಲ್ ಅಹ್ಮದ್ ಮುಲ್ಕಿ (ಕಾರ್ಯಾಧ್ಯಕ್ಷರು), ಪ್ರವೀಣ್ ಚಂದ್ರ ಜೈನ್ (ಹಿರಿಯ ಉಪಾಧ್ಯಕ್ಷರು), ಅಜೀಜ್ ಕುದ್ರೋಳಿ (ಉಪಾಧ್ಯಕ್ಷರು) ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.