5:08 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ: ಜಿಲ್ಲೆಯ 8 ಕ್ಷೇತ್ರದಲ್ಲೂ ಸ್ಪರ್ಧೆ

07/01/2023, 11:03

ಮಂಗಳೂರು(reporterkarnataka.com): ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ ಆಗಮಿಸಲಿದೆ ಎಂದು ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾಕೆ ಮಾಧವಗೌಡ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ವಾಹನ ಜಾಗೃತಿ ಜಾಥಾ ನಡೆಸಲಾಗುತ್ತಿದೆ. ರಾಜ್ಯದಲ್ಲಿ 123 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸುವ ಗುರಿಯನ್ನು ಜೆಡಿಎಸ್ ಹೊಂದಿದೆ. ಜೆಡಿಎಸ್‌ನ ಪಂಚರತ್ನ ಯೋಜನೆಯು ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ, ವಸತಿ ಮತ್ತು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ನುಡಿದರು.

ದಕ್ಷಿಣ ಕನ್ನಡದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ನಡೆಸಿ ಎರಡರಿಂದ ಮೂರು ಹೆಸರನ್ನು ಚುನಾವಣೆಗೆ ಸ್ಪರ್ಧಿಸಲು ಆಯ್ಕೆ ಮಾಡುತ್ತಿದ್ದೇವೆ. ಅಭ್ಯರ್ಥಿಗಳ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಗ್ರಾಮೀಣ ಭಾಗದ ಜನರು ಪಕ್ಷದ ಬಗ್ಗೆ ಅಭಿಮಾನ ಹೊಂದಿದ್ದಾರೆ ಎಂದರು.

ದ.ಕ.ಘಟಕದ ಪದಾಧಿಕಾರಿಗಳನ್ನು ಪುನರ್ ರಚಿಸಲಾಗಿದೆ. ಸುಶೀಲ್ ನೊರೊನ್ಹಾ (ವಕ್ತಾರರು), ನಜೀರ್ ಉಳ್ಳಾಲ್ (ಕಾರ್ಯಾಧ್ಯಕ್ಷರು), ವಸಂತ ಪೂಜಾರಿ (ಕಾರ್ಯಾಧ್ಯಕ್ಷರು), ಇಕ್ಬಾಲ್ ಅಹ್ಮದ್ ಮುಲ್ಕಿ (ಕಾರ್ಯಾಧ್ಯಕ್ಷರು), ಪ್ರವೀಣ್ ಚಂದ್ರ ಜೈನ್ (ಹಿರಿಯ ಉಪಾಧ್ಯಕ್ಷರು), ಅಜೀಜ್ ಕುದ್ರೋಳಿ (ಉಪಾಧ್ಯಕ್ಷರು) ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು