8:30 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ

02/07/2025, 19:48

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಭ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ ಆರೋಪಿಸಿದೆ.


ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರದ ಆಡಳಿತದಲ್ಲಿನ ಭ್ರಷ್ಟಾಚಾರ, ಲಂಚಗುಳಿತನ ಹಾಗೂ ಆಡಳಿತ ವೈಫಲ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಬೇಸರಗೊಂಡು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳೇ ಟೀಕಾ ಪ್ರಹಾರ ಮಾಡುತ್ತಿದ್ದು, ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಅವರು; ಅನುದಾನವಿಲ್ಲದೆ ಶಾಸಕರು ಕ್ಷೇತ್ರಗಳ ಅಭಿವೃದ್ಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಈ ಕಾರಣಕ್ಕೆ ಶಾಸಕರು ಬಂಡಾಯ ಎದ್ದಿದ್ದು, ಇದು ಸರ್ಕಾರದ ಅಧಃಪತನಕ್ಕೆ ಕಾರಣವಾಗಲಿದೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ಶಾಸಕ ಟಿ.ಎನ್. ಜವರಾಯಿಗೌಡ ರವರು, ಮಾಜಿ ಶಾಸಕ ಕೆ.ಎ.ತಿಪ್ಪೇಸ್ವಾಮಿ, ಪಕ್ಷದ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಫ್ರೋಜ್ ಬೇಗ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಉತ್ತರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಎ.ಎಂ.ಪ್ರವೀಣ್ ಕುಮಾರ್, ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ನಾಗೇಶ್ವರ ರಾವ್, ಬೆಂಗಳೂರು ನಗರ ಕಾರ್ಯಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್.ರಮೇಶ, ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ತಾರಾ ಲೋಕೇಶ್ ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು