ಇತ್ತೀಚಿನ ಸುದ್ದಿ
ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಸ್ಥಾನದಿಂದ ಸಿ. ಎಂ. ಇಬ್ರಾಹಿಂ ಉಚ್ಚಾಟನೆ: ಎಚ್.ಡಿ. ಕುಮಾರಸ್ವಾಮಿ ನೇಮಕ
19/10/2023, 19:33

ಬೆಂಗಳೂರು(reporterkarnataka.com): ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟಿಸಲಾಗಿದೆ. ಇದರೊಂದಿಗೆ ಜೆಡಿಎಸ್ ರಾಜ್ಯ ಸಮಿತಿಯನ್ನೂ ವಿಸರ್ಜಸಲಾಗಿದೆ.
ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಇಬ್ರಾಹಿಂ ಅವರನ್ನು ಅಧ್ಯಕ್ಷ ಸ್ಥಾನದ ಉಚ್ಚಾಟಿಸಿ ತನ್ನ ಪುತ್ರ ಎಚ್. ಡಿ. ಕುಮಾರಸ್ವಾಮಿ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಗುರುವಾರ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ರಾಜ್ಯ ಸಮಿತಿ ಸಭೆಯ ನಂತರ ದೇವೇಗೌಡ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.
ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ. ಪಕ್ಷದ ರಾಜ್ಯ ಕಾರ್ಯಕಾರಿಣಿ ಸಮಿತಿ ಕೂಡ ವಿಸರ್ಜಿಸಿ ಆದೇಶ ಹೊರಡಿಸಲಾಗಿದೆ ಎಂದರು.
ಶಾಸಕಾಂಗ ಪಕ್ಷದ ನಾಯಕ ಆಗಿರುವ ಎಚ್ ಡಿ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿಸಲು ನಾವೆಲ್ಲ ಒಟ್ಟಾಗಿ ಸೇರಿ ಸರ್ವಾನುಮತದಿಂದ ತೀರ್ಮಾನಿಸಿದ್ದೇವೆ ಎಂದರು.