3:38 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಜೆಡಿಎಸ್ ಸಭೆಗೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಆಹ್ವಾನ ಇಲ್ಲ: ಪಕ್ಷದೊಳಗೆ ಅಸಮಾಧಾನದ ಹೊಗೆ

22/02/2023, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮದ ಅಂಗವಾಗಿ ಕೊಟ್ಟಿಗೆಹಾರದಲ್ಲಿ ನಡೆದ ಬಣಕಲ್ ಹೋಬಳಿ ಘಟಕದ ಸಭೆಗೆ ಸ್ಥಳೀಯ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಸಭೆ ನಡೆಸಿರುವುದರಿಂದ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಜೆಡಿಎಸ್ ಮುಖಂಡ ತನು ಕೊಟ್ಟಿಗೆಹಾರ ತಿಳಿಸಿದ್ದಾರೆ.
ಕೊಟ್ಟಿಗೆಹಾರದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ತಿಳಿಸಿರುವ ಅವರು ‘ಜೆಡಿಎಸ್ ಪಕ್ಷಕ್ಕೆ ಹಲವು ವರ್ಷಗಳಿಂದ ಗುರುತಿಸಿಕೊಂಡು ಕಾರ್ಯ ನಿರ್ವಹಿಸುತ್ತಾ ಪಕ್ಷದ ಮೇಲೆ ಅಭಿಮಾನ ಇಟ್ಟು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದೇವೆ.

ಆದರೆ ಮಾರ್ಚ್ 1 ರಂದು ಮೂಡಿಗೆರೆಯಲ್ಲಿ ನಡೆಯುವ ಪಂಚರತ್ನ ಕಾರ್ಯಕ್ರಮಕ್ಕೆ ಹೋಬಳಿ ಘಟಕದಿಂದ ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮಂಗಳವಾರ ಮುಖಂಡರು ಸಭೆ ಏರ್ಪಡಿಸಿ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ಬೇಸರ ತಂದಿದೆ. ಪಕ್ಷಕ್ಕೆ ಈಚೆಗೆ ಸೇರಿದವರನ್ನು ಕರೆದು ಹಿಂದಿನಿಂದಲೂ ಪಕ್ಷಕ್ಕೆ ದುಡಿದ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರ ಕಡೆಗಣನೆ ಪಕ್ಷದಲ್ಲಿ ಅಸಮಾಧಾನ ತರಲು ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು