2:17 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಜೆಡಿಎಸ್‌ ಸದೃಢಗೊಳಿಸಲು ಪಂಚರತ್ನ ಪ್ರವಾಸ: ನಿಖಿಲ್ ಕುಮಾರಸ್ವಾಮಿ

11/09/2022, 10:51

ಬೆಂಗಳೂರು(reporterkarnataka.com): ಜೆಡಿಎಸ್‌ ಪಕ್ಷವು ಪಂಚರತ್ನ ಪ್ರವಾಸ ಕೈಗೊಂಡು ಪಕ್ಷವನ್ನ ಸದೃಢಗೊಳಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅಧ್ಯಕ್ಷ ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ರಾಜ್ಯ ಜೆಡಿಎಸ್‌ ಯುವ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. 

ತಾಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸಿನಲ್ಲಿ ನೂತನವಾಗಿ ಎ.ಬಿ ಚಾಯ್ಸ್‌ ಎಂಬ ನೂತನ ಹೋಟೆಲ್‌ ಉದ್ಘಾಟಿಸಿ ನೆರೆದಿದ್ದ ಅಸಂಖ್ಯಾತ ಜೆಡಿಎಸ್‌ ಪಕ್ಷದ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದರು. 

ತುಮಕೂರು ಜಿಲ್ಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 60 ವರ್ಷದ ರಾಜಕೀಯ ಹಿನ್ನೆಲೆಯುಳ್ಳ ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ದೇವೇಗೌಡರನ್ನು ಕರೆತಂದು ರಾಜಕೀಯ ಷಡ್ಯಂತ್ರದಿಂದ ಸೋಲಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಪಕ್ಷ ಗೆಲ್ಲುವಂತೆ ಕಾರ್ಯಕರ್ತರು ದುಡಿದು ಸರಿಯಾದ ಪಾಠ ಕಲಿಸಬೇಕು.

ರಾಜ್ಯದ 224 ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪ್ರವಾಸ ಕೈಗೊಳ್ಳಲು ಕಷ್ಟವಾಗಿದ್ದು, ಅವರಿಗೆ ಆರೋಗ್ಯ ಸಂಬಂಧಿ ಕಾಯಿಲೆ ಇದ್ದರೂ ಸಹ ಪಕ್ಷವನ್ನು ಸದೃಢಗೊಳಿಸಲು ಯಾವುದೇ ಜಾತಿ, ಧರ್ಮ ನೋಡದೆ ದುಡಿಯುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು