ಇತ್ತೀಚಿನ ಸುದ್ದಿ
ಜೀವನದಲ್ಲಿ ಜಿಗುಪ್ಸೆ: ಸಿದ್ದಾಪುರ ಮಾರುಕಟ್ಟೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
30/10/2022, 10:08

ಸಿದ್ದಾಪುರ(reporterkarnataka.com):
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರ ಮಾರುಕಟ್ಟೆ ಕಟ್ಟಡದ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ 6ಗಂಟೆಗೆ ಬೆಳಕಿಗೆ ಬಂದಿದೆ.
ಮೃತರನ್ನು ಮಡಾಮಕ್ಕಿ ನಿವಾಸಿ ರಾಜೀವ ಹೆಗ್ಡೆ(66) ಎಂದು ಗುರುತಿಸಲಾಗಿದೆ. ಇವರು ವಿಪರೀತ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದು, ಕಳೆದ 26 ವರ್ಷದಿಂದ ಮನೆ ಬಿಟ್ಟು ಎಲ್ಲೆಂದರಲ್ಲಿ ವಾಸ ಮಾಡುತ್ತಿದ್ದರು. ಇದೇ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡು ಅ.28ರ ರಾತ್ರಿಯಿಂದ ಅ.29ರ ಬೆಳಿಗ್ಗೆ6 ಗಂಟೆಯ ಮಧ್ಯಾವಧಿಯಲ್ಲಿ ಸಿದ್ದಾಪುರ ಮಾರುಕಟ್ಟೆಯ ಒಳಗಡೆ ಪಕ್ಕಾಸಿಗೆ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ