5:41 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಜನರಲ್  ಬಿಪಿನ್ ರಾವತ್ ಸಾವಿನ ಸಂಭ್ರಮಾಚರಣೆ: ಮಂಗಳೂರಿನಲ್ಲಿ 3 ಮಂದಿಯ ವಿರುದ್ಧ ಎಫ್ ಐಆರ್ 

11/12/2021, 23:38

ಮಂಗಳೂರು(reporterkarnataka.com): ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನೆಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ ಯೋಧರ ಸಾವಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮೂರು ಮಂದಿಯ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ ಓರ್ವ ಬೆಂಗಳೂರು, ಇನ್ನೋರ್ವ ಕಾರ್ಕಳ ಹಾಗೂ ಮತ್ತೋರ್ವ ಮಂಗಳೂರು ಮೂಲದವರು. ಫೇಸ್‌ಬುಕ್ ಖಾತೆಗಳು ಅಸಲಿಯೇ ಅಥವಾ ನಕಲಿಯೆ? ಎಲ್ಲಿಂದ ಈ ಖಾತೆಗಳನ್ನು ತೆರೆಯಲಾಗಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಸಂತ್ ಕುಮಾರ್ ಟಿ.ಕೆ ಎಂಬ ಫೇಸ್‌ಬುಕ್ ಖಾತೆಯಿಂದ ಮತ್ತು ಸುಬ್ಬರಾವ್ ರವಿಕುಮಾರ್ ಎಂಬ ಹೆಸರಿನ ಫೇಸ್‌ಬುಕ್‌ಖಾತೆಯಿಂದ ಜನರಲ್ ಬಿಪಿನ್ ರಾವತ್ ಅವರ ಕುರಿತು ಹಾಗೂ ಶ್ರೀನಿವಾಸ ಕಾರ್ಕಳ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ.ಆರೋಪಿಗಳು ಜಾಲತಾಣಗಳಲ್ಲಿ ಬಿಪಿನ್ ರಾವತ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆಯೂ ಸಾಕಷ್ಟು ಪ್ರಚೋದನಕಾರಿ ಪೋಸ್ಟ್ ಹಾಕಿರುವುದು ಪತ್ತೆಯಾಗಿದೆ. ಈ ಬಗ್ಗೆ ಸುಶಾಂತ್ ಎಂಬವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದರು.

ಅವಮಾನ ಮಾಡುವಂತಹ ಹೇಳಿಕೆಗಳು ಜನಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಅಪಾಯ ಭೀತಿಯನ್ನು ಹುಟ್ಟಿಸುವ ಉದ್ದೇಶ ಹೊಂದಿದೆ. ಆರೋಪಿಗಳನ್ನು ಶೀಘ್ರ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದವರು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು