2:50 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಜನರಲ್  ಬಿಪಿನ್ ರಾವತ್ ಸಾವಿನ ಸಂಭ್ರಮಾಚರಣೆ: ಮಂಗಳೂರಿನಲ್ಲಿ 3 ಮಂದಿಯ ವಿರುದ್ಧ ಎಫ್ ಐಆರ್ 

11/12/2021, 23:38

ಮಂಗಳೂರು(reporterkarnataka.com): ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನೆಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ ಯೋಧರ ಸಾವಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮೂರು ಮಂದಿಯ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ ಓರ್ವ ಬೆಂಗಳೂರು, ಇನ್ನೋರ್ವ ಕಾರ್ಕಳ ಹಾಗೂ ಮತ್ತೋರ್ವ ಮಂಗಳೂರು ಮೂಲದವರು. ಫೇಸ್‌ಬುಕ್ ಖಾತೆಗಳು ಅಸಲಿಯೇ ಅಥವಾ ನಕಲಿಯೆ? ಎಲ್ಲಿಂದ ಈ ಖಾತೆಗಳನ್ನು ತೆರೆಯಲಾಗಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಸಂತ್ ಕುಮಾರ್ ಟಿ.ಕೆ ಎಂಬ ಫೇಸ್‌ಬುಕ್ ಖಾತೆಯಿಂದ ಮತ್ತು ಸುಬ್ಬರಾವ್ ರವಿಕುಮಾರ್ ಎಂಬ ಹೆಸರಿನ ಫೇಸ್‌ಬುಕ್‌ಖಾತೆಯಿಂದ ಜನರಲ್ ಬಿಪಿನ್ ರಾವತ್ ಅವರ ಕುರಿತು ಹಾಗೂ ಶ್ರೀನಿವಾಸ ಕಾರ್ಕಳ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ.ಆರೋಪಿಗಳು ಜಾಲತಾಣಗಳಲ್ಲಿ ಬಿಪಿನ್ ರಾವತ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆಯೂ ಸಾಕಷ್ಟು ಪ್ರಚೋದನಕಾರಿ ಪೋಸ್ಟ್ ಹಾಕಿರುವುದು ಪತ್ತೆಯಾಗಿದೆ. ಈ ಬಗ್ಗೆ ಸುಶಾಂತ್ ಎಂಬವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದರು.

ಅವಮಾನ ಮಾಡುವಂತಹ ಹೇಳಿಕೆಗಳು ಜನಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಅಪಾಯ ಭೀತಿಯನ್ನು ಹುಟ್ಟಿಸುವ ಉದ್ದೇಶ ಹೊಂದಿದೆ. ಆರೋಪಿಗಳನ್ನು ಶೀಘ್ರ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದವರು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು