6:02 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಜೆರೋಸ ಪ್ರಕರಣ; ಕರ್ತವ್ಯ ಲೋಪವೆಸಗಿದ ಶಾಸಕದ್ವಯರನ್ನು ವಜಾಗೊಳಿಸಿ: ಸ್ಪೀಕರ್ ಗೆ ಐವನ್ ಡಿಸೋಜ, ಜೆ.ಆರ್. ಲೋಬೊ ಆಗ್ರಹ

15/02/2024, 11:55

ಮಂಗಳೂರು(reporterkarnataka.com): ನಗರದ ವೆಲೆನ್ಸಿಯಾದಲ್ಲಿರುವ ಜೆರೋಸ ಶಾಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ. ಭರತ್ ಶೆಟ್ಟಿ ಅವರು ಅನುಚಿತ ವರ್ತನೆ ಮಾಡಿದ್ದಾರೆ. ಶಾಸಕರಾಗಿಯೂ ಕರ್ತವ್ಯ ಲೋಪ ಎಸಗಿದ್ದು,ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಹೇಳಿದರು.
ನಗರದ ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಶಾಸಕರು ವಿಚಾರಣೆ ಮಾಡಲು ಅವಕಾಶ ಕಲ್ಪಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದರ ಬದಲು ಅನುಚಿತವಾಗಿ ವರ್ತನೆ ಮಾಡಿದ್ದಾರೆ. ಶಾಸಕರಾಗಿಯೂ ಕರ್ತವ್ಯ ಲೋಪ ಎಸಗಿದ್ದಾರೆ. ಹಾಗಾಗಿ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ಐವನ್ ಆಗ್ರಹಿಸಿದರು.
ಶಾಲೆಯಲ್ಲಿ ಶಿಕ್ಷಕಿಯಿಂದ ಏನಾದರೂ ತಪ್ಪಾಗಿದ್ದರೆ ಶಿಕ್ಷಕಿ ವಿರುದ್ಧ ಸೂಕ್ತ ಕ್ರಮಕ್ಕಾಗಿ ದೂರು ನೀಡಿ ಬಳಿಕ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಅವಕಾಶ ಇತ್ತು. ಆದರೆ ಅದೇನನ್ನೂ ಮಾಡದೆ
ವಿದ್ಯಾರ್ಥಿಗಳನ್ನು ಸೇರಿಸಿ ಶಾಲೆ ಆವರಣದಲ್ಲಿ ಶಿಕ್ಷಕರನ್ನು ಅವಮಾನಗೊಳಿಸಿ ನಿಂದಿಸಿರುವುದು, ಕೋಮು ದ್ವೇಷದ ಹೇಳಿಕೆ ನೀಡಿರುವುದು ಖಂಡನೀಯ. ಶಾಸಕರ ಈ ವರ್ತನೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಎಂದು ಐವನ್ ಆಗ್ರಹಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೊ ಅವರು ಮಾತನಾಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾದ ಶಾಸಕರು ತಮ್ಮ ಹೊಣೆಗಾರಿಕೆ ಮರೆತು ವರ್ತಿಸಿದ್ದಾರೆ. ಅವರು ಶಾಸಕರಾಗಿ ಮುಂದುವರೆಯುವ ಅರ್ಹತೆ ಕಳೆದುಕೊಂಡಿದ್ದಾರೆ. 60 ವರ್ಷಗಳ ಇತಿಹಾಸವಿರುವ ಸಂಸ್ಥೆಯ ಘನತೆಗೆ ಧಕ್ಕೆ ಉಂಟು ಮಾಡುವ ಕೆಲಸ ಶಾಸಕರಿಂದ ನಡೆದಿದೆ ಎಂದರು.
ಮಂಗಳೂರಿನಲ್ಲಿ ಬಿಜೆಪಿಯಿಂದ ಯೋಗೀಶ್ ಭಟ್, ಧನಂಜಯ ಕುಮಾರ್ ಕೂಡ ಶಾಸಕರಾಗಿದ್ದರು. ಆದರೆ, ಅವರು ಈ ಇಬ್ಬರು ಶಾಸಕರು ಎಂದೂ ಈ ರೀತಿ ವರ್ತಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ.ವಿ.ಮೋಹನ್ ನುಡಿದರು.
ಕಾಂಗ್ರೆಸ್ ಮುಖಂಡ ಎಂ.ಜಿ.ಹೆಗಡೆ ಮಾತನಾಡಿ, ಶಿಕ್ಷಕಿಯ ಮಾತುಗಳ ಬಗ್ಗೆ ಆಕ್ಷೇಪವಿದ್ದರೆ ಪೋಷಕರು ಶಾಲೆಗೆ ಬಂದು ದೂರು ನೀಡಲು ಅವಕಾಶವಿತ್ತು. ಈ ಬಗ್ಗೆ ವಿಚಾರಣೆ ನಡೆದು ಕ್ರಮ ಜರುಗಿಸಲು ಅವಕಾಶ ಇರುವಾಗ ಗೊಂದಲ ಸೃಷ್ಟಿಸಿ ಅದರ ಫೋಟೊ, ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಢಿಯಲ್ಲಿ ಇಬ್ರಾಹಿಂ ಕೋಡಿಜಾಲ್, ಸದಾಶಿವ ಉಳ್ಳಾಲ್, ಎ. ಸಿ. ವಿನಯರಾಜ್, ನವೀನ್ ಡಿಸೋಜ, ಅಪ್ಪಿ ಲತಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು