ಇತ್ತೀಚಿನ ಸುದ್ದಿ
ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಅಳವಡಿಸಿದ ಎನ್ ಎಸ್ ಯುಐ ಜಿಲ್ಲಾಧ್ಯಕ್ಷರ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು: ಸ್ಥಳಕ್ಕೆ ಪೊಲೀಸರ ಭೇಟಿ
13/02/2024, 23:35
ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತ ಸಮಾವೇಶ ಕುರಿತು ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಹಾಕಲಾದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಮಂಗಳವಾರ ರಾತ್ರಿ ಹರಿದು ಹಾಕಿದ್ದಾರೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ಫ್ಲೆಕ್ಸ್ ಅನ್ನು ಹಾಕಲಾಗಿತ್ತು. ಫೆಬ್ರವರಿ 17ರಂದು ನಗರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಸಂಬಂಧಿಸಿ ಫ್ಲೆಕ್ಸ್ ಇದಾಗಿತ್ತು. ಅದನ್ನು ಮಂಗಳವಾರ ರಾತ್ರಿ ಸುಮಾರು 9.30ರ ವೇಳೆಗೆ ಕಿಡಿಗೇಡಿಗಳು ಹರಿದು ಹಾಕಿದ್ದಾರೆ.ಎಂದು ಅನುಮಾನ ವ್ಯಕ್ತ ಪಡಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಸುತ್ತಮುತ್ತ ಅಳವಡಿಸಿದ ಸಿಸಿ ಟಿವಿ ಕ್ಯಾಮರಾ ದ ಫೂಟೇಜ್ ಅವಲೋಕಿಸಿದರೆ ಕಿಡಿಗೇಡಿಗಳ ಪತ್ತೆ ಸಾಧ್ಯವಾಗಲಿದೆ.ಸತ್ಯ ಸತ್ಯತೆ ತನಿಖೆ ಯಿಂದ ತಿಳಿದು ಬರಬೇಕಿದೆ.