1:54 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜಿಲ್ಲಾ ಮಟ್ಟದ ಕ್ರಿಕೆಟ್: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

01/10/2024, 19:51

ರಶ್ಮಿ ಶ್ರೀಕಾಂತ್ ನಾಯಕ್
ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಶಾಲಾ ಶಿಕ್ಷಣ ಇಲಾಖೆ
ಸೆ. 30ರಂದು ಭದ್ರಾವತಿಯಲ್ಲಿ
ನಡೆಸಿದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಕ್ರಿಕೆಟ್ ಆಯ್ಕೆಯಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅನುಜ್ ( 9 ನೆಯ ತರಗತಿ), ಉತ್ಸವ್ ಗೌಡ (8 ನೆಯ ತರಗತಿ), ವರ್ಚಸ್ (8 ನೆಯ ತರಗತಿ) ಮತ್ತು ಪೂರ್ವ (7 ನೆಯ ತರಗತಿ) ಇವರು ಅತ್ಯುತ್ತಮವಾಗಿ ತಮ್ಮ ಆಟವನ್ನು ಪ್ರದರ್ಶಿಸಿ ಶೈಕ್ಷಣಿಕ ವಿಭಾಗವಾಗಿರುವ ಬೆಂಗಳೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅತ್ಯುತ್ತಮ ಮಾರ್ಗದರ್ಶನವನ್ನು ನೀಡಿ, ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕರಿಸಿದ ಸಿಟಿ ಕ್ರಿಕೆಟ್ ಕ್ಲಬ್ ನ ಮುಖ್ಯಸ್ಥರಾದ ಅಬ್ದುಲ್ ಕಲಾಂ ಆಜಾದ್‌ ರವರಿಗೆ ಹಾಗೂ ತರಬೇತಿದಾರರಾದ ಸುಬ್ರಹ್ಮಣ್ಯ, ಅವರಿಗೆ ವಾಗ್ದೇವಿ ಶಿಕ್ಷಣ ಸಂಸ್ಥೆ ಅಭಿನಂದನೆ ಸಲ್ಲಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು,
ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಅಭಿನಂದಿಸಿ ಮುಂದಿನ ಕ್ರೀಡೆಗೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು