9:04 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ: ಉದ್ಯೋಗದ ಬಗ್ಗೆ  ಹೆಚ್ಚಿನ ಕಾರ್ಯಕ್ರಮ ನಡೆಸಲು ಜಿಲ್ಲಾಧಿಕಾರಿ ಸೂಚನೆ

30/03/2022, 23:57

ಮಂಗಳೂರು(reporterkarnataka.com): ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಜಿಲ್ಲಾ ಸಲಹಾ ಸಮಿತಿ 2021 2022 ನೇ ಸಾಲಿನ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ವಹಿಸಿದ್ದರು, ನೆಹರು ಯುವ ಕೇಂದ್ರ 2021-2022 ನೇ ಸಾಲಿನ ಕಾರ್ಯಚಟುವಟಿಕೆಗಳ ವರದಿ ಮಂಡನೆಯನ್ನು  ಮಂಗಳೂರು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್‌ ಸೂಟರ್‌ಪೇಟೆ ನಡೆಸಿದರು.

ಜಿಲ್ಲಾಧಿಕಾರಿ ಮಾತನಾಡಿ, ನೆಹರು ಯುವ ಕೇಂದ್ರದ ಮಂಗಳೂರು ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಹಾಗೂ ಆರೋಗ್ಯ ಕೌಶಲ್ಯ ಅಭಿವೃದ್ಧಿ ಉದ್ಯೋಗ ಮತ್ತು ಪರಿಸರ ಸಂರಕ್ಷಣೆ, ಹಾಗೂ ಯುವಜನರಿಗೆ ಉದ್ಯೋಗದ ಬಗ್ಗೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ನಡೆಸುವಂತೆ ತಿಳಿಸಿದರು.

ಲೀಡ್ ಬ್ಯಾಂಕ್ ಆಫೀಸರ್ ಪ್ರವೀಣ್ ಅವರು ಡಿಜಿಟಲ್ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಡಾ.ಕಿಶೋರ್ (ವೈದ್ಯಾಧಿಕಾರಿಗಳು),  ವಿವೇಕಾನಂದ ಜಿ (ಉಪನಿರ್ದೇಶಕರು ಡಿ.ಐ.ಸಿ), ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ., ಎನ್.ಸಿಸಿ ಅಧಿಕಾರಿ ವಿಠಲ್,  ಲೀಡ್ ಬ್ಯಾಂಕ್ ಚೀಫ್ ಮ್ಯಾನೇಜರ್ ಪ್ರವೀಣ್ ಎಮ್.ಪಿ, ಕನ್ನಡ ಜಿಲ್ಲಾ ಪಂಚಾಯತ್,ಸಹಾಯಕ ಯೋಜನಾಧಿಕಾರಿ ಸರೋಜಿನಿ,ಉಪನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರದೀಪ್ ಡಿ ಸೋಜಾ, ದ.ಕ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ, ದ. ಕ  ಜಿಲ್ಲಾ ವಾರ್ತಾ ಅಧಿಕಾರಿ ರವಿರಾಜ್, ಜಿಲ್ಲಾ ಯುವ ರೆಡ್ ಕ್ರಾಸ್ ಕಾರ್ಯದರ್ಶಿ ಕುಸುಮ ತಾರ ಬಿ.ಕೆ, ದ. ಕ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ, ಎಸ್ ಜಿ ಹೇಮಚಂದ್ರ, ಪರಿಸರವಾದಿ ಜಿತ್ ಮಿಲನ್ ರೋಚ್,  ನೆಹರು ಯುವ ಕೇಂದ್ರ ದ ಜಗದೀಶ್ ಕೆ.ಎ, ನೆಹರು ಯುವ ಕೇಂದ್ರದ ಯುವ ಪ್ರತಿನಿಧಿಗಳಾದ  ಪ್ರೀತೇಶ್, ಸುಶ್ಮಿತಾ ಬಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು