ಇತ್ತೀಚಿನ ಸುದ್ದಿ
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಶಾಮಣ್ಣ ಬಣಕಲ್ ಹೃದಯಾಘಾತಕ್ಕೆ ಬಲಿ
09/08/2024, 11:35
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಮಣ್ಣ ಬಣಕಲ್ ತೀವ್ರ ಹೃದಯಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ಬುಧವಾರ ಬಣಕಲ್ ಪೇಟೆಯಲ್ಲಿ ಹಠಾತ್ತನೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಬಣಕಲ್ ಹಾಗೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಬೆಂಗಳೂರು ಆಸ್ಪತ್ರೆ ತಲುಪಿದಾಗಲೇ ಅವರು ಕೊನೆಯುಸಿರೆಳೆದಿದ್ದರು. ಶಾಮಣ್ಣ ಅವರು ಮೂಡಿಗೆರೆ ತಾಲ್ಲೂಕಿನ ಬಣಕಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಬಣಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಸ್ತುತ ನಿರ್ದೇಶಕರಾಗಿದ್ದರು.
ಅಪಾರ ಜ್ಞಾನವಂತರಾಗಿದ್ದ ಶಾಮಣ್ಣ ಅವರು ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಅಪಾರ ಸ್ನೇಹ ಬಳಗ ಹೊಂದಿದ್ದರು. ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಹಕಾರ ಕ್ಷೇತ್ರದ ಮುಖಂಡರು, ಸಾರ್ವಜನಿಕರು, ಅಭಿಮಾನಿ ಬಳಗದವರು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸಬ್ಲಿ ಗ್ರಾಮದಲ್ಲಿ ಸಾವಿರಾರು ಜನರು ಮೃತರ ಅಂತಿಮ ದರ್ಶನ ಪಡೆದರು. ಬಿಜೆಪಿ ಪಕ್ಷದಿಂದ ಶಾಮಣ್ಣ ಅವರ ಮೃತ ದೇಹಕ್ಕೆ ಬಿಜೆಪಿ ಬಾವುಟ ಹೊದಿಸಿ ಅಂತಿಮ ನಮನ ಸಲ್ಲಿಸಿದರು ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ ಸಬ್ಲಿ ರುದ್ರಭೂಮಿಯಲ್ಲಿ ನೆರವೇರಿತು.