12:25 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ; ಅಧಿಕಾರಿಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡಿ ಡೆಂಗ್ಯು ನಿಯಂತ್ರಿಸಿ: ಸಿಎಂ ಸಿದ್ದರಾಮಯ್ಯ

08/07/2024, 18:38

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎಂಬ ಭಾವನೆ ಇದ್ದರೆ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಿಲ್ಲ. ಇಷ್ಟರವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ(ಸಿಇಒ) ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನಸೇವಕರು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು. ಸರಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸಮನ್ವಯತೆಯಿಂದ ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರಕಾರದ ಯೋಜನೆಗಳು, ಕಾರ್ಯಕ್ರಮಗಳು ಜನರಿಗೆ ತಲುಪಲು ಸಾಧ್ಯ. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಾಗಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು ಕೆಳ ಹಂತದ ಅಧಿಕಾರಿಗಳ ಜತೆ ಸಭೆ ನಡೆಸಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು