10:34 PM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಅಧಿಕಾರಿಗಳ ಮೇಲೆ ಬೆದರಿಕೆ ತಂತ್ರ ಅನುಸರಿಸುತ್ತಿದ್ದಾರೆ: ಮಾಜಿ ಸಚಿವ ರಮಾನಾಥ ರೈ

22/08/2023, 19:49

ಮಂಗಳೂರು(reporterkarnataka.com): ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಅಧಿಕಾರಿಗಳ ಮೇಲೆ ಬೆದರಿಕೆ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದಕ್ಕೆ ಜಗ್ಗದೆ ಅಧಿಕಾರಿಗಳು
ಕಾನೂನು ಪ್ರಕಾರ ಕಾರ್ಯ ನಿರ್ವಹಿಸಬೇಕೆಂದು ಮಾಜಿ ಸಚಿವ ಬಿ.ರಮಾನಾಥ ರೈ ಕಿವಿಮಾತು ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ.
ಅವರು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ ಎಂದು ಗುಡುಗಿದರು.
ಶಿಷ್ಟಾಚಾರದ ನೆಪದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಬಾಗಿಲಲ್ಲಿ ಬಿಜೆಪಿ ಶಾಸಕರು, ಸಂಸದರು, ಜನಪ್ರತಿನಿಧಿಗಳ ನಡೆಸಿದ ಪ್ರತಿಭಟನೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಲಿದೆ. ಇದು ಅಧಿಕಾರಿಗಳನ್ನು ಬೆದರಿಸುವ ತಂತ್ರದ ಭಾಗವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ ಆದ ರೈ ನುಡಿದರು.
ಬಿಜೆಪಿ ಅಧಿಕಾರದಲ್ಲಿದ್ದ ವೇಳೆ ಅಕ್ರಮ ಸಕ್ರಮ ಸಮಿತಿ ಅಡಿ 71 ಪ್ರಕರಣಗಳು ಕಾನೂನು ಬಾಹಿರವಾಗಿ ನಡೆಸಿರುವ ಬಗ್ಗೆ ದೂರು ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸಮಿತಿ ಮಾಡಿ ತನಿಖೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಳಿಕ ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳು ನೀರಿನಿಂದ ತೆಗೆದ ಮೀನಿನಂತೆ ಆಗಿದ್ದಾರೆ. ಅವರು ಅಧಿಕಾರ ಇಲ್ಲದೇ ಇರುವುದಿಲ್ಲ. ರಾಜ್ಯದಲ್ಲಿ ಸರಕಾರ ಇಲ್ಲ, ಮೊದಲು ಅವರು ಹೇಳಿದಂತೆ ಎಲ್ಲವೂ ಆಗುತ್ತಿತ್ತು,ಆದರೆ ಈಗ ಅದು ಸಾಧ್ಯವಿಲ್ಲ ಎಂದರು.
ಉಜ್ವಲ ಯೋಜನೆಯನ್ನು ಕ್ಷೇತ್ರದ ಮತದಾರನೂ ಅಲ್ಲದ, ಶಾಸಕನೂ ಅಲ್ಲದವರಿಂದ ಹಂಚಿಕೆ ಮಾಡಲಾಗಿದೆ. ಇಂತಹ ದಬ್ಬಾಳಿಕೆಗಳು ಬಿಜೆಪಿ ಆಡಳಿತದಲ್ಲಿ ಅಧಿಕಾರಿಗಳ ಮೂಲಕ ನಡೆಸಲಾಗುತ್ತಿತ್ತು. ಅದರೆ ಅದನ್ನು ಈಗ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅಧಿಕಾರಿಗಳನ್ನು ಬೆದರಿಸುವ ತಂತ್ರವನ್ನು ಮಾಡಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 135 ಶಾಸಕರನ್ನು ಗೆದ್ದ ಬಲಿಷ್ಠ ಸರಕಾರ ಆಡಳಿತದಲ್ಲಿದೆ. ಅಧಿಕಾರಿಗಳು ಇದಕ್ಕೆ ಸೊಪ್ಪು ಹಾಕದೇ ನಿಮ್ಮ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಅವರ ಅಧಿಕಾರದ ದುರಹಾಂಕಾರ ಮೀತಿ ಮೀರಿತ್ತು. ಅವರಿಗೆ ಅಧಿಕಾರದ ಮದ ತಲೆಗೆ ಏರಿತ್ತು. ಹಿಂದಿನ ರೀತಿ ಈಗ ನಿಮ್ಮ ಚಾಳಿ ನಡೆಯಲ್ಲ. ಈಗ ನಮ್ಮ ಸರಕಾರ ಅಧಿಕಾರದಲ್ಲಿ ಇದೆ. ನಿಮ್ಮ ಬೆದರಿಕೆಗೆ ಯಾರೂ ಕೂಡ ಹೆದರಲ್ಲ. ಕಳೆದ 13 ವರ್ಷಗಳ ಕಾಲ ಜಿಲ್ಲೆಯಲ್ಲಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ನಾವು ಎಂದಿಗೂ ದಬ್ಬಾಳಿಕೆ ಮಾಡಿದವರಲ್ಲ. ಶಿಷ್ಟಾಚಾರದ ಅಡಿಯಲ್ಲಿ ಹೆಸರು ಇಲ್ಲ ಎಂದು ಹೇಳಿ ಪ್ರತಿಭಟನೆ ಮಾಡುವುದು ಸರಿಯಾದ ಕ್ರಮವಲ್ಲ ಎಂದರು.
ಬಂಟ್ವಾಳದ ಒಂದೇ ಕ್ಷೇತ್ರದಲ್ಲಿ ನಾಲ್ಕು ಮಂದಿ ಮಹಿಳೆಯರಿಗೆ ಮೀಸಲಾತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡಿದರು. ಚುನಾವಣೆಗೆ ಸ್ಪರ್ಧೆ ಮಾಡಬಾರದು ಎಂಬ ಕಾರಣಕ್ಕೆ ಹೀಗೆ ಮಾಡಿದರು. ಯಾವುದೇ ಕ್ಷೇತ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ ಇತಿಹಾಸ ಇಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡು ಶಾಸಕರು ಮೀಸಲಾತಿ ಮಾಡಿರುವುದು ಕಾನೂನು ಬಾಹಿರ ಅಲ್ಲವೇ? ಇದಕ್ಕೆ ಶಾಸಕರೇ ಉತ್ತರ ನೀಡಬೇಕು ಎಂದು ಆಕ್ರೋಶ ಹೊರಹಾಕಿದರು.

ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಲ್ಯಾನ್ಸಿ ಲಾಟ್ಪಿಂಟೋ, ಶುಭೋದಯ ಆಳ್ವ, ಜಯಶೀಲ ಅಡ್ಯಂತಾಯ, ಶಾಹುಲ್ ಹಮೀದ್, ಪೃಥ್ವಿರಾಜ್, ಜೋಕಿಂ ಡಿಸೋಜ, ವಿಶ್ವಾಸ್ ದಾಸ್, ಚಂದ್ರ ಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸಲೀಂ, ಪ್ರಕಾಶ್ ಸಾಲಿಯಾನ್, ಅಪ್ಪಿ, ಸುಹಾನ್ ಆಳ್ವ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು