1:51 PM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ

11/03/2022, 12:31

ಮಂಗಳೂರು(reporterkarnataka.com):

ಜ್ಞಾನಪೀಠ ಪ್ರಶಸ್ತಿ ಘೋಷಿತ ಕೊಂಕಣಿ ಲೇಖಕ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ವಿಶ್ವ ಕೊಂಕಣಿ ಕೇಂದ್ರದಲ್ಲಿ ಮಾರ್ಚ್ 20 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ 

ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ ಮತ್ತು ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಭಿನಂದನಾ ಭಾಷಣವನ್ನು ನೀಡಲಿದ್ದಾರೆ.

19ರಂದು ವಿಶ್ವ ಕೊಂಕಣಿ ಕೇಂದ್ರ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಜಂಟಿ ಆಯೋಜನೆಯಲ್ಲಿ ಜರಗಲಿರುವ “ಬಸ್ತಿ ವಾಮನ ಶೆಣೈ – ಜೀವನ ಮತ್ತು ಕಾರ್ಯ” ಕುರಿತಾದ ಸಿಂಪೊಸಿಯಮ್ ನಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿರುವ

ದಾಮೋದರ ಮೌಜೊ ಆ ಬಳಿಕ ವಿಶ್ವ ಕೊಂಕಣಿ ಕೇಂದ್ರ ಮತ್ತು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಜಂಟಿ ಆಯೋಜನೆಯಲ್ಲಿ ಜರಗಲಿರುವ ವಿಶ್ವ ಕೊಂಕಣಿ ಸಮಾರೋಪ (ಕೊಂಕಣಿ ಲಿಟ್ ಫೆಸ್ಟ್) ದಲ್ಲಿ “ಕೊಂಕಣಿ ಸಾಹಿತ್ಯ: ಜ್ಞಾನಪೀಠ ಮತ್ತು ಮುಂದಿನ ಹಾದಿ” ಕುರಿತಾಗಿ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿರುವರು. ಕೊಂಕಣಿ ಸಾಹಿತಿ ಹೆಚ್. ಎಂ. ಪೆರ್ನಾಲ್ ಈ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಡಲಿರುವರು.

ಗೋವಾದ ಮಜೋರ್ಡಾದಲ್ಲಿ ವಾಸವಾಗಿರುವ 

ಮೌಜೊ ಕೊಂಕಣಿಯ ಪ್ರಸಿದ್ಧ ಕಾದಂಬರಿಕಾರರಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಗೋವಾ ವಿಮೋಚನೆ, ಅಧಿಕೃತ ರಾಜ್ಯಭಾಷೆ, ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಕೊಂಕಣಿ, ಶಾಲಾ ಶಿಕ್ಷಣದಲ್ಲಿ ಕೊಂಕಣಿ ಮೊದಲಾದ ಅನೇಕ ಹೋರಾಟಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿರುವ ಮೌಜೊರವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುವಾದಗೊಂಡು ಪ್ರಸಿದ್ಧವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು