9:04 PM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಫೆ.23ರಂದು ಉದ್ಯೋಗ ಮೇಳ; ಪೋಸ್ಟರ್ ಬಿಡುಗಡೆ ಮಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

18/02/2026, 20:10

ದಾವಣಗೆರೆ(reporterkarnata.com): ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಅನ್ನು‌ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮ‌ ಗೃಹಕಚೇರಿಯಲ್ಲಿ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು ಜಿಲ್ಲಾಡಳಿತ, ಜಿ.ಪಂ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಜಿಲ್ಲಾ ಕೌಶಲ್ಯ ಮಿಷನ್,ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,ಮಹಾನಗರ ಪಾಲಿಕೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಐಟಿ ವಲಯ, ಫೈನಾನ್ಸ್, ಬ್ಯಾಂಕಿಂಗ್, ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್, ಬಿ.ಪಿ.ಒ, ವಾಯ್ಸ್, ರೀಟೈಲ್, ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.
ಉದ್ಯೋಗ ಹುಡುಕುತ್ತಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೇಳದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು