9:37 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜೊಲ್ಲೆ ಉದ್ಯೋಗ ಸಮೂಹದಿಂದ ಕೊರೊನಾ ವಾರಿಯರ್ಸ್ ಗಳಿಗೆ ಕೊರೊನಾ ಕಿಟ್ ವಿತರಣೆ

06/06/2021, 08:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣವನ್ನು ವಿದೇಶಿ ಔಷಧಿಗಿಂತ ಸ್ವದೇಶೀ ಔಷಧಿಗಳ ಮೂಲಕ ಪರಿಣಾಮಕಾರಿಯಾಗಿ ಗುಣಪಡಿಸಲಾಗುತ್ತದೆ. ತಾಲೂಕಿನಲ್ಲಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಜನರಿಗೆ ಕೊರೊನಾ ಪರೀಕ್ಷೆ ಮಾಡುವ ಮೂಲಕ ಕೊರೊನಾವನ್ನು  ತಡೆಗಟ್ಟಲು ಸಹಕರಿಯಾಗಬೇಕು. ಈಗಾಗಲೇ 2ನೇ ಅಲೆಯಲ್ಲಿ ಹಲವಾರು ಜನರಿಗೆ ಆದ ತೊಂದರೆ ಆದದನ್ನು ಗಮನಿಸಿ 3ನೇ ಅಲೆಯ ಮುಂಜಾಗ್ರತ ಕ್ರಮವಾಗಿ ತಾಲೂಕಿನಲ್ಲಿ ಆಕ್ಸಿಜನ್ ಉತ್ಪಾದನಾ ಕೇಂದ್ರ ಹಾಗೂ ಸುಮಾರು 400 ಆಕ್ಸಿಜನ್ ಬೆಡ್ ಹೊಂದಿರುವ ಕೋವಿಡ್ ಕೇರ್ ಸೆಂಟರನ್ನು ಪ್ರತಿ ತಾಲೂಕಿನಲ್ಲಿ ನಿರ್ಮಿಸಲಾಗುವುದು.

ಈಗಾಗಲೇ ತಾಲೂಕಿನಲ್ಲಿ ಕೊರೊನಾ ಹತೋಟಿಗೆ ಬಂದದ್ದು, ಇನ್ನು ಸ್ವಲ್ಪ ದಿನಗಳಲ್ಲಿ  ಪೂರ್ಣ ಪ್ರಮಾಣದಲ್ಲಿ ಇಲ್ಲದಂತಾಗುವುದು. 

ಇದೇ ವೇಳೆಯಲ್ಲಿ ಮಾತನಾಡಿದ ಆರ್ ಎಸ್ ಎಸ್ ಮುಖಂಡ ಅರವಿಂದ್ ದೇಶಪಾಂಡೆ ಅವರು ತಾಲೂಕಿನಲ್ಲಿ ಕೊರೊನಾ  ಹತೋಟಿಗೆ ಬರಲು ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಹೇಶ್ ಕುಮಟಳ್ಳಿ ಅವರ ಪಾತ್ರ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎಂದರು.

 ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಮಾತನಾಡಿ, ಈಗಾಗಲೇ ಫ್ರಂಟ್ಲೈನ್ ವಾರಿಯರ್ ಗಳಾದ ಪತ್ರಕರ್ತರಿಗೂ ಸಹ ವಿಶೇಷ ಪ್ಯಾಕೇಜ್ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಆದಷ್ಟು ಬೇಗ ಪತ್ರಕರ್ತರಿಗೂ ಸಹ ಒಂದು ವಿಶೇಷ ಪ್ಯಾಕೇಜ್ ಕೊಡಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು